ಕೊಣಾಜೆ, ಆ.7: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘ (ರಿ.), ಗ್ರಾಮ ಚಾವಡಿ ಕೊಣಾಜೆಯ ಗುರು ಸಾನಿಧ್ಯದಲ್ಲಿ ಇಂದು ವಾರದ ಗುರುಪೂಜೆಯ ಸಂದರ್ಭದಲ್ಲಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ದಿನೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.


ಸಂಘದ ಅಧ್ಯಕ್ಷರಾದ ವಿಜೇತ್ ಪಜೀರು ಅವರು ಗುರು ಹಿರಿಯರು, ಕಿರಿಯರು ಹಾಗೂ ಮಾತೆಯರ ಸಮ್ಮುಖದಲ್ಲಿ 2026ರ ಆಗಸ್ಟ್ 28ರಂದು (ಶುಕ್ರವಾರ) ನಡೆಯಲಿರುವ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜನ್ಮ ದಿನೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು, ಜನ್ಮ ದಿನೋತ್ಸವವನ್ನು ಅರ್ಥಪೂರ್ಣವಾಗಿ ಮತ್ತು ವಿಜೃಂಭಣೆಯಿಂದ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.

