ಮಂಗಳೂರು: ಪ್ರಿನ್ಸ್ ಬಸ್ ಮಾಲಕರಾದ ಡೇವಿಡ್ ಡಿಸೋಜಾ ಅವರನ್ನು ಹಾಡುಹಗಲೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಅತ್ಯಂತ ಆಘಾತಕಾರಿ ಹಾಗೂ ಖಂಡನೀಯ ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ (ರಿ.), ಮಂಗಳೂರು ತೀವ್ರವಾಗಿ ಖಂಡಿಸಿದೆ.

ಸಾರ್ವಜನಿಕವಾಗಿ ಗೌರವ ಹೊಂದಿದ್ದ ಬಸ್ ಉದ್ಯಮದ ಮಾಲಕರೊಬ್ಬರನ್ನು ಹಾಡುಹಗಲೇ ಗುಂಡಿಕ್ಕಿ ಹತ್ಯೆ ಮಾಡಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇಂತಹ ಅಮಾನವೀಯ ಕೃತ್ಯಗಳು ಸಮಾಜದಲ್ಲಿ ಭಯದ ವಾತಾವರಣವನ್ನು ಸೃಷ್ಟಿಸುವುದರ ಜೊತೆಗೆ ಸಾರ್ವಜನಿಕರ ಸುರಕ್ಷತೆಯ ಬಗ್ಗೆಯೂ ಗಂಭೀರ ಪ್ರಶ್ನೆಗಳನ್ನು ಮೂಡಿಸುತ್ತವೆ ಎಂದು ಸಂಘ ತಿಳಿಸಿದೆ.
ಡೇವಿಡ್ ಡಿಸೋಜಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಂಘ, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಕುಟುಂಬ ಸದಸ್ಯರು, ಬಂಧು-ಬಳಗ ಮತ್ತು ಆತ್ಮೀಯರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದೆ.
ಪ್ರಕರಣವನ್ನು ಸಮಗ್ರ ಹಾಗೂ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಬೇಕು. ಅಲ್ಲದೆ, ಆರೋಪಿಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘವು ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಆಗ್ರಹಿಸಿದೆ.
ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ (ರಿ.), ಮಂಗಳೂರು
ಉಸ್ಮಾನ್ ಅಲ್ತಾಫ್
ಅಧ್ಯಕ್ಷರು

