ದೆಹಲಿ, ಆ. 08: ನವದೆಹಲಿಯ ಜಂತರ್ ಮಂತರ್ನಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ನೇತೃತ್ವದಲ್ಲಿ ನಡೆದ ಪ್ರತಿಭಟನೆ ಹಾಗೂ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯ ಬಳಿಕ, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ , ನಮಗೆ ನಿಮ್ಮ ಮೇಲೆ ನಂಬಿಕೆಯಿದೆ. ‘ವಿಕಸಿತ ಭಾರತ’ ನಿರ್ಮಾಣದ ಪಯಣದಲ್ಲಿ ದೇಶಕ್ಕೆ ನಿಮ್ಮ ಅಗತ್ಯವಿದೆ ಎಂದು ಯುವ ಪೀಳಿಗೆಗೆ ಕರೆ ನೀಡಿದ್ದಾರೆ.

ಖ್ಯಾತ ಭಾರತೀಯ ತಂತ್ರಜ್ಞಾನ ಸಂಸ್ಥೆ ನವದೆಹಲಿಯ ವಾರ್ಷಿಕ ಪದವಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಿಯವರು ಶನಿವಾರ ಮಾತನಾಡಿದರು. ಪ್ರತಿಯೊಂದು ಪೀಳಿಗೆಗೂ ಅದರದ್ದೇ ಆದ ರಾಷ್ಟ್ರೀಯ ಜವಾಬ್ದಾರಿ ಇರುತ್ತದೆ. ಮುಂದಿನ 30 ರಿಂದ 35 ವರ್ಷಗಳಲ್ಲಿ ನೀವು ಕೈಗೊಳ್ಳುವ ಪ್ರತಿ ನಿರ್ಧಾರವೂ ದೇಶದ ಹಿತಾಸಕ್ತಿ ಹಾಗೂ ರಾಷ್ಟ್ರದ ಅಗತ್ಯಗಳನ್ನು ಪೂರೈಸುವಂತಿರಬೇಕು ಎಂದು ಮೋದಿ ಹೇಳಿದರು.ವೇಗವಾಗಿ ಬದಲಾಗುತ್ತಿರುವ ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದೆ. ಜಾಗತಿಕ ಕಾರ್ಯತಂತ್ರ ಮತ್ತು ಜಾಗತಿಕ ಶಕ್ತಿಯ ಸಮತೋಲನ ಕ್ಷಣಕ್ಷಣಕ್ಕೂ ಬದಲಾಗುತ್ತಿದ್ದು, ಹೊಸ ಬದಲಾವಣೆಗಳಿಗೆ ತಕ್ಕಂತೆ ಕಲಿಯುತ್ತಾ ಸಾಗುವವರು ಮಾತ್ರ ಅಂತಿಮವಾಗಿ ಯಶಸ್ಸು ಸಾಧಿಸುತ್ತಾರೆ ಎಂದು ಪ್ರತಿಪಾದಿಸಿದರು.‘ಸ್ಕೈರೂಟ್’ ಸಂಸ್ಥೆಯ ‘ವಿಕ್ರಮ್-1’ ರಾಕೆಟ್ನ ಯಶಸ್ಸುನ್ನು ಉಲ್ಲೇಖಿಸಿದ ಅವರು, ಸರ್ಕಾರವು ಯುವಕರ ಕೊಡುಗೆಗಾಗಿ ಹಲವು ಹೊಸ ಕ್ಷೇತ್ರಗಳನ್ನು ಮುಕ್ತಗೊಳಿಸಿದೆ. ಬಾಹ್ಯಾಕಾಶ ಕ್ಷೇತ್ರವು ಇಂದು ಯುವಕರಿಗೆ ಅಗಾಧ ಅವಕಾಶಗಳನ್ನು ತೆರೆದಿಟ್ಟಿದೆ.

