ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಹರೇಕಳ: ದೈಹಿಕ ಕಸರತ್ತಿಗೆ ಕ್ರೀಡೆ ಅತೀ ಮುಖ್ಯವಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ನಡೆಯುವ ಇಂತಹ ಕ್ರೀಡಾಕೂಟಗಳನ್ನು ಇಂದಿನ ಯುವ ಜನತೆ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತುಳುನಾಡು ಚಿಟ್ಸ್ ಪ್ರೈವೆಟ್ ಲಿಮಿಟೆಡ್‍ನ ಆಡಳಿತ ನಿರ್ದೇಶಕ ಸಂದೇಶ ಶೆಟ್ಟಿ ಕೊಳ್ಕೆ ಅಭಿಪ್ರಾಯಪಟ್ಟರು.
ಅವರು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಐದು ಗ್ರಾಮಗಳ ಪುರುಷರಿಗಾಗಿ ಮುಕ್ತ ವಾಲಿಬಾಲ್ ಪಂದ್ಯಾಟ ಚೈತನ್ಯ ಕಪ್ -2015 ಹಾಗೂ ಮೂರು ಗ್ರಾಮಗಳ ಪುರುಷರಿಗಾಗಿ ಮುಕ್ತ ಕಬಡ್ಡಿ ಪಂದ್ಯಾಟ ಸೌಜನ್ಯ ಕಪ್ -2015ಕ್ಕೆ ಚಾಲನೆ ನೀಡಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರೇಕಳ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮೋಹನ್‍ದಾಸ್ ಶೆಟ್ಟಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಅಳೇಕಲ ಮದನಿ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಆನಂದ ಕೆ. ಅಸೈಗೋಳಿ, ತಾಲೂಕು ಪಂಚಾಯತ್ ಸದಸ್ಯ ಮಹಮ್ಮದ್ ಮುಸ್ತಾಫ, ರಾಷ್ಟ್ರೀಯ ಕ್ರೀಡಾಪಟು ಟಿ.ವಿ. ಅಂಬು, ಅತ್ತಾವರ ಶಾಖೆಯ ಸ್ಟೇಟ್‍ಬ್ಯಾಂಕ್ ಆಫ್ ಇಂಡಿಯಾದ ಉದ್ಯೋಗಿ ಎಂ. ಪರಮೇಶ್ವರ, ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಸದಸ್ಯ ಸೋಮಶೇಖರ ಚೌಟ, ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ ದ.ಕ.ಇದರ ಉಳ್ಳಾಲ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಎಂ.ಜಿ.ಕಜೆ, ದೈಹಿಕ ಶಿಕ್ಷಕ ರಾಧಾಕೃಷ್ಣ ರೈ ಉಪಸ್ಥಿತರಿದ್ದರು.
ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರವೀಂದ್ರ ರೈ ಹರೇಕಳ ಸ್ವಾಗತಿಸಿದರು. ಶಿಕ್ಷಕಿ ಉಷಾಲತ ವಂದಿಸಿದರು. ದೈಹಿಕ ಶಿಕ್ಷಕ ಹಾಗೂ ಕಾರ್ಯಕ್ರಮ ಸಂಯೋಜಕ ತ್ಯಾಗಂ ಹರೇಕಳ ಕಾರ್ಯಕ್ರಮ ನಿರ್ವಹಿಸಿದರು.


