ಕೋಟೆಕಾರ್: ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್, ಇಹ್ಸಾನುಲ್ ವಹ್ಹಾಬ್ ಅಲ್ ಮದ್ರಸತುಲ್ ಹಿದಾಯ, ಕೆಎಂಜೆ, ಎಸ್ವೈಎಸ್ ಹಾಗೂ ಎಸ್ಸೆಸ್ಸೆಫ್ ಹಿದಾಯತ್ ನಗರ ಇದರ ಜಂಟಿ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಹಧ್ಸಿನ್ ಶಕೂರ್ ಸಅದಿ, ಸದರ್ ಅಬ್ದುಲ್ ನಯೀಮಿ, ಮುಅಲ್ಲಿಂ ಫಾರೂಕ್ ಸಅದಿ ಕೊಮರಂಗಳ, ಮಸೀದಿ ಉಪಾಧ್ಯಕ್ಷ ಕೆ.ಎಂ. ಅಬ್ದುಲ್ ಕಾದರ್, ಸಬೀರ್ ಅಶ್ಅರಿ, ಝುಬೈರ್ ಝುಹ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಂತರ ಮದರಸ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಲಾಯಿತು. ಮಸೀದಿ ಕಾರ್ಯದರ್ಶಿ ಸಿದ್ದೀಕ್ ಟಿ.ಎಚ್. ವಂದಿಸಿದರು.

