ಪಜೀರು: ಸರ್ವೋದಯ ಯುವಕ ಮಂಡಲದಲ್ಲಿ ಲೋಹಿತ್ ಪಜೀರು ಅವರ ಅಧ್ಯಕ್ಷತೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಗ್ರಾಮದ ಹಿರಿಯರಾದ 94 ವರ್ಷದ ಕೆ. ತಿಮ್ಮಣ್ಣ ಆಳ್ವ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯೋತ್ಸವ ಆಚರಣೆ ನಮ್ಮ ಹೆಮ್ಮೆ ಮಾತ್ರವಲ್ಲ, ನಮ್ಮ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ ಎಂದು ಹೇಳಿದರು. ಇದೇ ವೇಳೆ ಕಾರ್ಯಕ್ರಮಕ್ಕೆ ಆಗಮಿಸಿದ ಸರ್ವಧರ್ಮೀಯರಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಕೃಷ್ಣ ಭಜನಾ ಮಂದಿರದ ಅಧ್ಯಕ್ಷ ಯಶೋಧರ ಜೋಗಿಬೆಟ್ಟು, ತುಳಸಿ ಮಾತೃ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಸುಮತಿ ಆ್ಯಂಡಿ, ಕ್ರೈಸ್ತ ಸಮುದಾಯದ ಗ್ರಾಮದ ಗುರಿಕಾರ ರಿಚರ್ಡ್ ಅಪೋಸ್ ಹಾಗೂ ರೆಹಮಾನೀಯ ಜುಮ್ಮಾ ಮಸೀದಿಯ ಧರ್ಮಗುರುಗಳು ಉಪಸ್ಥಿತರಿದ್ದರು. ಮಂಡಲದ ಸದಸ್ಯರು ಹಾಗೂ ಊರಿನ ನಾಗರಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಯಶಸ್ ಭಟ್ ಅವರು ‘ವಂದೇ ಮಾತರಂ’ ರಾಷ್ಟ್ರಗೀತೆಯನ್ನು ಹಾಡಿದರು. ಮಿಥುನ್ ಪಜೀರು ಅತಿಥಿಗಳನ್ನು ಸ್ವಾಗತಿಸಿದರು. ಮೋಹನ್ ದಾಸ್ ಕಾಪಿಕಾಡ್ ಧನ್ಯವಾದ ಸಮರ್ಪಿಸಿದರು. ನಿರ್ಮಲ್ ಭಟ್ ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದ ಕೊನೆಯಲ್ಲಿ ಎಲ್ಲರಿಗೂ ಸಿಹಿ ತಿಂಡಿ ವಿತರಿಸಲಾಯಿತು.