Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಮಂಗಳೂರು: ಕರಾವಳಿಯಲ್ಲಿ ಅಡಿಕೆ ರೋಗ ತಡೆಗೆ ಕೇಂದ್ರದಿಂದ ಬೆಂಬಲ; ಕ್ಯಾ. ಚೌಟರಿಗೆಸಚಿವ ಶಿವರಾಜ್ ಚೌಹಾಣ್ ಭರವಸೆ

UllalaVaniBy UllalaVaniAugust 24, 2026No Comments2 Mins Read
Facebook Twitter Pinterest LinkedIn Tumblr Email WhatsApp
data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}
Share
Facebook Twitter LinkedIn Pinterest Email WhatsApp

ಮಂಗಳೂರು, ಆ. 24: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಅಡಿಕೆ ಬೆಳೆಗೆ ಬಾಧಿಸಿರುವ ಎಲೆಚುಕ್ಕಿಯಂತಹ ವಿವಿಧ ರೋಗಗಳ ನಿಯಂತ್ರಣಕ್ಕೆ ವೈಜ್ಞಾನಿಕ ಸಂಶೋಧನೆ, ಕ್ಷೇತ್ರ ಸಮೀಕ್ಷೆ ಹಾಗೂ ಸಮಗ್ರ ರೋಗ ನಿರ್ವಹಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಗೆ ತಿಳಿಸಿದ್ದಾರೆ.

ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಕ್ಯಾ. ಚೌಟ ಅವರು ಪ್ರಸ್ತಾಪಿಸಿರುವ ಈ ವಿಷಯಕ್ಕೆ ಉತ್ತರಿಸಿರುವ ಸಚಿವರು, ಈ ಮಾಹಿತಿ ಹಂಚಿಕೊಂಡಿದ್ದಾರೆ. ಅಡಿಕೆ ಬೆಳೆಗೆ ಬಾಧಿಸುತ್ತಿರುವ ಪ್ರಮುಖ ರೋಗಗಳ ನಿಯಂತ್ರಣಕ್ಕೆ ಕಾಸರಗೋಡಿನ ಕೇಂದ್ರ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ(ICAR-CPCRI) ಕೈಗೊಳ್ಳುತ್ತಿರುವ ವಿವಿಧ ಕ್ರಮಗಳ ಬಗ್ಗೆ ಸಚಿವರು ವಿವರಿಸಿದ್ದಾರೆ.ಅಡಿಕೆಗೆ ಬಾಧಿಸುವ ಹಳದಿ ಎಲೆ ರೋಗ ಹಾಗೂ ಎಲೆ ಚುಕ್ಕೆ ರೋಗ ಸೇರಿದಂತೆ ವಿವಿಧ ರೋಗಗಳ ಕುರಿತು ಸಂಶೋಧನೆ ಮತ್ತು ಕ್ಷೇತ್ರ ಮಟ್ಟದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳ್ತಂಗಡಿ ಹಾಗೂ ಸುಳ್ಯ ಸೇರಿದಂತೆ ಏಳು ಕ್ಲಸ್ಟರ್‌ಗಳಲ್ಲಿ ಶಿಫಾರಸು ಮಾಡಲಾದ ಸಮಗ್ರ ರೋಗ ನಿರ್ವಹಣಾ ಪದ್ಧತಿಗಳ ಕ್ಷೇತ್ರ ಪ್ರಾತ್ಯಕ್ಷಿಕೆ ನಡೆಸಲಾಗಿದ್ದು, ಅವುಗಳನ್ನು ಅಳವಡಿಸಿಕೊಂಡ ಬಳಿಕ ರೋಗ ಬಾಧಿತ ಅಡಿಕೆ ತೋಟಗಳಲ್ಲಿ ರೋಗದ ತೀವ್ರತೆ ಕೂಡ ಗಮನಾರ್ಹವಾಗಿ ಕಡಿಮೆಯಾಗಿರುವುದು ಕಂಡುಬಂದಿದೆ ಎಂದು ಅವರು ಸಚಿವ ಚೌಹಾಣ್‌ ಅವರು ಹೇಳಿದ್ದಾರೆ.ಅಡಿಕೆಗೆ ಬಾಧಿಸುವ ಕೊಳೆರೋಗ ನಿಯಂತ್ರಣಕ್ಕಾಗಿ ಮುಂಗಾರು ಆರಂಭಕ್ಕೂ ಮುನ್ನ ಹಾಗೂ ಮುಂಗಾರು ಅವಧಿಯಲ್ಲಿ ಶಿಫಾರಸು ಮಾಡಲಾದ ಶಿಲೀಂಧ್ರ ನಾಶಕಗಳನ್ನು ಸೂಕ್ತ ಸಮಯದಲ್ಲಿ ಬಳಸುವ ಮುನ್ನೆಚ್ಚರಿಕಾ ಕ್ರಮಗಳನ್ನು ಅಭಿವೃದ್ಧಿಪಡಿಸಲಾಗಿದೆ. ಈ ಕ್ರಮಗಳನ್ನು ಅನುಸರಿಸಿದ ಬಳಿಕವೂ ರೋಗದ ಪ್ರಮಾಣ ಕಡಿಮೆಯಾಗುವುದರ ಜತೆಗೆ ಅಡಿಕೆ ಇಳುವರಿಯಲ್ಲೂ ಸುಧಾರಣೆ ಕಂಡುಬಂದಿರುವ ಬಗ್ಗೆ ಕ್ಷೇತ್ರ ಅಧ್ಯಯನಗಳಿಂದ ಗೊತ್ತಾಗಿದೆ ಎಂದು ಸಚಿವರು ತಿಳಿಸಿದ್ದಾರೆ.ಹಳದಿ ಎಲೆ ರೋಗದ ನಿಯಂತ್ರಣ ಹಾಗೂ ಉತ್ತಮ ರೀತಿಯ ಸಸಿ ನೆಡುವ ವ್ಯವಸ್ಥೆ ಅಳವಡಿಕೆ ಸೇರಿದಂತೆ ನಾನಾ ಆಯಾಗಳಲ್ಲಿ ರೋಗ ನಿಯಂತ್ರಣಕ್ಕೆ ಸಂಶೋಧನೆ ನಡೆಯುತ್ತಿದೆ. ರೋಗದ ಪ್ರಮಾಣ ಕಡಿಮೆ ಇರುವ ಪ್ರದೇಶಗಳ ರೈತರ ತೋಟಗಳಲ್ಲಿ ಸಮಗ್ರ ನಿರ್ವಹಣಾ ಕ್ರಮಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ತೋರಿಸಲಾಗುತ್ತಿದ್ದು, ಇದಕ್ಕೆ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯದ ಸಹಕಾರವನ್ನು ಕೂಡ ಪೆಡೆದುಕೊಳ್ಳಲಾಗಿದೆ ಎಂದರು.ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಸೇರಿದಂತೆ ಅತಿಹೆಚ್ಚು ಅಡಿಕೆ ಬೆಳೆಯುವ ಜಿಲ್ಲೆಗಳಲ್ಲಿ ವರದಿಯಾಗಿರುವ ಎಲೆ ಚುಕ್ಕೆ ರೋಗದ ಸಮಸ್ಯೆಯ ಬಗ್ಗೆಯೂ ಕೃಷಿ ಸಚಿವಾಲಯ ಸಚಿವಾಲಯ ಪರಿಶೀಲನೆ ನಡೆಸುತ್ತಿದೆ. 2022ರ ನವೆಂಬರ್‌ನಲ್ಲಿ ರಚಿಸಲಾಗಿದ್ದ ರಾಷ್ಟ್ರೀಯ ಅಡಿಕೆ ವೈಜ್ಞಾನಿಕ ಸಮಿತಿ ಕೂಡ ಈ ಅಡಿಕೆ ರೋಗಗಳ ಬಗ್ಗೆ ಪರಿಶೀಲಿಸಿ, ಕ್ಷೇತ್ರ ಸಮೀಕ್ಷೆಗಳು, ರೈತರು ಹಾಗೂ ಸಂಬಂಧಿತ ಪಾಲುದಾರರೊಂದಿಗೆ ಸಮಾಲೋಚನೆ ಮತ್ತು ವೈಜ್ಞಾನಿಕ ಮೌಲ್ಯಮಾಪನದ ಆಧಾರದ ಮೇಲೆ ಸಮಗ್ರ ರೋಗ ನಿರ್ವಹಣಾ ಕಾರ್ಯತಂತ್ರಗಳನ್ನು ಶಿಫಾರಸು ಮಾಡಿದೆ ಎಂದು ಕೃಷಿ ಸಚಿವ ಚೌಹಾಣ್ ಮಾಹಿತಿ ನೀಡಿದ್ದಾರೆ.ಈ ಸಂಶೋಧನಾ ಸಂಸ್ಥೆಗಳು ಶಿಫಾರಸು ಮಾಡಲಾದ ಕ್ರಮಗಳನ್ನು ಸಮಗ್ರ ತೋಟಗಾರಿಕಾ ಅಭಿವೃದ್ಧಿ ಮಿಷನ್ (MIDH)ನಡಿಯಲ್ಲಿ ಅಡಿಕೆ ಬೆಳೆಗೆ ರೋಗ ಬಾಧಿತ ಪ್ರದೇಶಗಳಲ್ಲಿ ಪ್ರಾತ್ಯಕ್ಷಿಕೆಯ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಸಚಿವಾಲಯ ಉಲ್ಲೇಖಿಸಿರುವ ಏಳು ಕ್ಲಸ್ಟರ್‌ಗಳಲ್ಲಿ ಶಿರಸಿ, ಸಿದ್ದಾಪುರ, ಬೆಳ್ತಂಗಡಿ ಹಾಗೂ ಸುಳ್ಯ ಸೇರಿದಂತೆ ವಿವಿಧ ಪ್ರದೇಶಗಳು ಒಳಗೊಂಡಿದ್ದು, ಶಿಫಾರಸು ಮಾಡಲಾದ ಕ್ರಮಗಳನ್ನು ಅಳವಡಿಸಿಕೊಂಡ ಬಳಿಕ ರೋಗದ ತೀವ್ರತೆ ಗಣನೀಯವಾಗಿ ಕಡಿಮೆಯಾಗಿರುವುದು ಕಂಡುಬಂದಿದೆ. ಎಲೆ ಚುಕ್ಕೆ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಅಕ್ಕಪಕ್ಕದ ತೋಟಗಳಲ್ಲಿಯೂ ಶಿಫಾರಸು ಮಾಡಲಾದ ಕ್ರಮಗಳನ್ನು ಸಮನ್ವಯದಿಂದ ಅನುಸರಿಸುವ ಅಗತ್ಯವಿದೆ. ಹೀಗಾಗಿ ಸಮುದಾಯ ಆಧಾರಿತ ರೋಗ ನಿರ್ವಹಣೆ, ಕ್ಷೇತ್ರ ಪ್ರಾತ್ಯಕ್ಷಿಕೆ, ರೈತರಲ್ಲಿ ಜಾಗೃತಿ ಮೂಡಿಸುವುದು ಹಾಗೂ ವೈಜ್ಞಾನಿಕವಾದ ಕ್ರಮಗಳ ಅಳವಡಿಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಸಚಿವರು ಹೇಳಿದ್ದಾರೆ.ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಯುವ ರೈತರ ಹಿತ ಕಾಪಾಡುವುದರ ಜತೆಗೆ ಅಡಿಕೆ ಕೃಷಿಯ ಉತ್ಪಾದಕತೆ ಮತ್ತು ಸುಸ್ಥಿರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕಾಸರಗೋಡಿನ ICAR-CPCRI ಸಂಸ್ಥೆಯು ಅಡಿಕೆ ಬೆಳೆಗಳನ್ನು ಬಾಧಿಸುವ ಪ್ರಮುಖ ರೋಗಗಳ ಕುರಿತು ತನ್ನ ವೈಜ್ಞಾನಿಕ ಸಂಶೋಧನೆಯನ್ನು ಮುಂದುವರಿಸಿ ಮುಂದಿನ ದಿನಗಳಲ್ಲಿಯೂ ಅಗತ್ಯ ತಾಂತ್ರಿಕ ನೆರವು ಮತ್ತು ಸಹಕಾರವನ್ನು ಒದಗಿಸಲಿದೆ ಎಂದು ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕ್ಯಾ. ಚೌಟ ಅವರಿಗೆ ನೀಡಿದ ಸುಧೀರ್ಘವಾದ ಉತ್ತರದಲ್ಲಿ ಭರವಸೆ ನೀಡಿದ್ದಾರೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಡುಪಿ : ತಾಯಿ-ಮಕ್ಕಳ ಹತ್ಯೆ ಕೇಸ್ – ಆರೋಪಿ ಚೌಗುಲೆಗೆ ಜೀವ ಬೆದರಿಕೆ

August 24, 2026

ಬಾಳೆ ಹಣ್ಣಿಗೆ ಕೃತಕ ಬಣ್ಣ: ಮನಷ್ಯನ ಜೀವಕ್ಕೆ ಎಷ್ಟು ಡೇಂಜರ್?

August 24, 2026

ಈರುಳ್ಳಿ ಬೆಲೆ ದಿಢೀರ್​ ಏರಿಕೆ: ಕಟ್ ಮಾಡದಿದ್ದರೂ ಗ್ರಾಹಕರಲ್ಲಿ ಕಣ್ಣೀರು ತರಿಸಿದ ದರ

August 24, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಉಡುಪಿ : ತಾಯಿ-ಮಕ್ಕಳ ಹತ್ಯೆ ಕೇಸ್ – ಆರೋಪಿ ಚೌಗುಲೆಗೆ ಜೀವ ಬೆದರಿಕೆ

By UllalaVaniAugust 24, 20260

ಉಡುಪಿ, ಆ. 23 : ನೇಜಾರಿನಲ್ಲಿ ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಬೆಂಗಳೂರಿನ ಜೈಲಿನಲ್ಲಿ ಜೀವ…

ಬಾಳೆ ಹಣ್ಣಿಗೆ ಕೃತಕ ಬಣ್ಣ: ಮನಷ್ಯನ ಜೀವಕ್ಕೆ ಎಷ್ಟು ಡೇಂಜರ್?

August 24, 2026

ಈರುಳ್ಳಿ ಬೆಲೆ ದಿಢೀರ್​ ಏರಿಕೆ: ಕಟ್ ಮಾಡದಿದ್ದರೂ ಗ್ರಾಹಕರಲ್ಲಿ ಕಣ್ಣೀರು ತರಿಸಿದ ದರ

August 24, 2026

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸಂಗ್ರಾಮ: 3 ದಿಕ್ಕಿನಲ್ಲೂ ವಿಧಾನಸೌಧ ಮುತ್ತಿಗೆಗೆ ಪ್ಲಾನ್

August 24, 2026
1 2 3 … 2,071 Next
Automatic YouTube Gallery

ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ

ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ವಿವಿಧ ಸ್ಪರ್ಧೆಗಳು

ಸಭಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ ಸೇರಿದಂತೆ ವಿವಿಧ ಭಜನಾ ಸಂಕೀರ್ತನೆಗಳು

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ
Now Playing
ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ...
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ವಿವಿಧ ಸ್ಪರ್ಧೆಗಳು

ಸಭಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ ಸೇರಿದಂತೆ ವಿವಿಧ ಭಜನಾ ಸಂಕೀರ್ತನೆಗಳು

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶಿಬಿರದಲ್ಲಿ ಬಟ್ಟೆಯ ಚೀಲಗಳನ್ನು ವಿತರಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಸಮಾಜದ ಸಂದೇಶ..!!
Now Playing
ಶಿಬಿರದಲ್ಲಿ ಬಟ್ಟೆಯ ಚೀಲಗಳನ್ನು ವಿತರಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಸಮಾಜದ ಸಂದೇಶ..!!
ಹಸಿರು ದಳ ಮಂಗಳೂರು, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಉಳ್ಳಾಲ ...
ಹಸಿರು ದಳ ಮಂಗಳೂರು, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು
ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ತೊಕ್ಕೊಟ್ಟು ಹಾಗೂ ಲಯನ್ಸ್ ಕ್ಲಬ್ ಅಮ್ಚೂರು ಇವರ ಸಂಯುಕ್ತ ಆಶ್ರಯ;

ತ್ಯಾಜ್ಯ ಕಾರ್ಮಿಕರಿಗಾಗಿ ಆರೋಗ್ಯ ತಪಾಸಣಾ ಶಿಬಿರ

📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version