Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಈರುಳ್ಳಿ ಬೆಲೆ ದಿಢೀರ್​ ಏರಿಕೆ: ಕಟ್ ಮಾಡದಿದ್ದರೂ ಗ್ರಾಹಕರಲ್ಲಿ ಕಣ್ಣೀರು ತರಿಸಿದ ದರ

UllalaVaniBy UllalaVaniAugust 24, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಬೆಂಗಳೂರು, ಆಗಸ್ಟ್​ 24: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಸಾಲು ಸಾಲು ಹಬ್ಬಗಳ ಸಂಭ್ರಮದಲ್ಲಿದ್ದ ಜನಸಾಮಾನ್ಯರಿಗೆ ಈರುಳ್ಳಿ ಬೆಲೆ ಏರಿಕೆ ಶಾಕ್​ ನೀಡಿದೆ. ನಿತ್ಯದ ಅಡುಗೆಯ ಅವಿಭಾಜ್ಯ ಅಂಗವಾಗಿರುವ ಈರುಳ್ಳಿಯನ್ನು ಕತ್ತರಿಸುವ ಮೊದಲೇ ಅದರ ದುಬಾರಿ ದರ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದ್ದು, ಕೆಲವೇ ದಿನಗಳಲ್ಲಿ ಈರುಳ್ಳಿ ಬೆಲೆ ಪ್ರತಿ ಕೆಜಿಗೆ ಶತಕ ಬಾರಿಸುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಬೆಲೆ ಏರಿಕೆಗೆ ಕಾರಣವೇನು?

ರಾಜ್ಯದಲ್ಲಿ ಒಂದೆಡೆ ಮುಂಗಾರು ಮಳೆ ಕೊರತೆಯಿಂದ ಬರಗಾಲ ತಾಂಡವವಾಡುತ್ತಿದೆ. ಮಳೆ, ಬೆಳೆ ಇಲ್ಲದೇ ರೈತರು ಕಂಗಾಲಾಗಿದ್ದಾರೆ. ಅದರಲ್ಲೂ ಮಳೆ ಬಾರದೇ ಈ ಸಲ ಸುಮಾರು ಶೇಕಡಾ 70% ರಷ್ಟು ಈರುಳ್ಳಿ ಇಳುವರಿ ಕಡಿಮೆ ಆಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿ ಈರುಳ್ಳಿ ದಾಸ್ತಾನು ಕಡಿಮೆಯಾಗಿದೆ. ಸದ್ಯ ಕರ್ನಾಟಕ ಮತ್ತು ಮಹಾರಾಷ್ಟ್ರದ ಈರುಳ್ಳಿ ಮಾತ್ರ ಮಾರುಕಟ್ಟೆಯಲ್ಲಿ ಲಭ್ಯವಿದೆ. ಮತ್ತೊಂದೆಡೆ, ಇಲ್ಲಿಂದ ಹೊರ ರಾಜ್ಯ ಹಾಗೂ ಹೊರ ದೇಶಗಳಿಗೆ ಈರುಳ್ಳಿ ರಫ್ತಾಗುತ್ತಿದ್ದರೂ, ಹೊರಗಿನಿಂದ ಆಮದು ಸಂಪೂರ್ಣ ಸ್ಥಗಿತಗೊಂಡಿರುವುದು ಬೆಲೆ ಗಗನಕ್ಕೇರಲು ಪ್ರಮುಖ ಕಾರಣವಾಗಿದೆ.

ಕೆಜಿ ಈರುಳ್ಳಿ ದರ 100 ರೂ ಮುಟ್ಟುವ ಸಾಧ್ಯತೆ

ಪ್ರಸ್ತುತ ಹಾಪ್‌ಕಾಮ್ಸ್ ಮಳಿಗೆಗಳಲ್ಲಿ ಗುಣಮಟ್ಟದ ಈರುಳ್ಳಿ ಬೆಲೆ ಕೆಜಿಗೆ 70 ರಿಂದ 75 ರೂಪಾಯಿವರೆಗೆ ತಲುಪಿದೆ. ಇತ್ತ ಎಪಿಎಂಸಿ ಸಗಟು ಮಾರುಕಟ್ಟೆಯಲ್ಲೇ ಕೆಜಿಗೆ 50 ರಿಂದ 60 ರೂ.ದರವಿದ್ದು, ಚಿಲ್ಲರೆ ಮಾರುಕಟ್ಟೆಯಲ್ಲಿ ಸಾಮಾನ್ಯ ಮತ್ತು ಉತ್ತಮ ಗುಣಮಟ್ಟದ ಈರುಳ್ಳಿ ಬೆಲೆ ಪ್ರತಿ ಕೆಜಿಗೆ 10 ರಿಂದ 20 ರೂಪಾಯಿ ಏರಿಕೆಯಾಗಿದೆ. ಮಾರುಕಟ್ಟೆ ತಜ್ಞರ ಪ್ರಕಾರ, ಈ ಬೆಲೆ ಏರಿಕೆಯ ಬಿಸಿ ಮುಂದಿನ ಒಂದು-ಒಂದೂವರೆ ತಿಂಗಳ ಕಾಲ ಮುಂದುವರಿಯಲಿದ್ದು, ಕೆಲವೇ ದಿನಗಳಲ್ಲಿ ಕೆಜಿ ಈರುಳ್ಳಿ ದರ 100 ರೂಪಾಯಿ ಮುಟ್ಟುವ ಸಾಧ್ಯತೆಯಿದೆ.

ಬೆಲೆ ಎಷ್ಟೇ ಆದರೂ ಈರುಳ್ಳಿ ಖರೀದ ಅನಿವಾರ್ಯ: ಗ್ರಾಹಕರು ಅಳಲು

‘ಸಾಮಾನ್ಯ ಈರುಳ್ಳಿಯೇ 50 ರೂಪಾಯಿ ದಾಟಿದೆ. ಈರುಳ್ಳಿ ಇಲ್ಲದೆ ಯಾವುದೇ ಅಡುಗೆ ಮಾಡಲು ಸಾಧ್ಯವಿಲ್ಲ, ಎಷ್ಟೇ ಬೆಲೆಯಾದರೂ ಅನಿವಾರ್ಯವಾಗಿ ಖರೀದಿಸಲೇಬೇಕಿದೆ’ ಎಂದು ಮಧ್ಯಮ ವರ್ಗದ ಗ್ರಾಹಕರು ಅಳಲು ತೋಡಿಕೊಂಡಿದ್ದಾರೆ.

ಇನ್ನಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಧ್ಯಪ್ರವೇಶಿಸಿ ಈರುಳ್ಳಿ ಬೆಲೆ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮತ್ತು ಈ ಹಿಂದಿನಂತೆ ಆಹಾರ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಮೂಲಕ ರಿಯಾಯಿತಿ ದರದಲ್ಲಿ ಜನರಿಗೆ ಈರುಳ್ಳಿ ಒದಗಿಸಬೇಕು ಎಂಬುದು ಸಾರ್ವಜನಿಕರ ಪ್ರಬಲ ಆಗ್ರಹವಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಡುಪಿ : ತಾಯಿ-ಮಕ್ಕಳ ಹತ್ಯೆ ಕೇಸ್ – ಆರೋಪಿ ಚೌಗುಲೆಗೆ ಜೀವ ಬೆದರಿಕೆ

August 24, 2026

ಬಾಳೆ ಹಣ್ಣಿಗೆ ಕೃತಕ ಬಣ್ಣ: ಮನಷ್ಯನ ಜೀವಕ್ಕೆ ಎಷ್ಟು ಡೇಂಜರ್?

August 24, 2026

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸಂಗ್ರಾಮ: 3 ದಿಕ್ಕಿನಲ್ಲೂ ವಿಧಾನಸೌಧ ಮುತ್ತಿಗೆಗೆ ಪ್ಲಾನ್

August 24, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಉಡುಪಿ : ತಾಯಿ-ಮಕ್ಕಳ ಹತ್ಯೆ ಕೇಸ್ – ಆರೋಪಿ ಚೌಗುಲೆಗೆ ಜೀವ ಬೆದರಿಕೆ

By UllalaVaniAugust 24, 20260

ಉಡುಪಿ, ಆ. 23 : ನೇಜಾರಿನಲ್ಲಿ ತಾಯಿ ಮತ್ತು ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಬೆಂಗಳೂರಿನ ಜೈಲಿನಲ್ಲಿ ಜೀವ…

ಬಾಳೆ ಹಣ್ಣಿಗೆ ಕೃತಕ ಬಣ್ಣ: ಮನಷ್ಯನ ಜೀವಕ್ಕೆ ಎಷ್ಟು ಡೇಂಜರ್?

August 24, 2026

ಈರುಳ್ಳಿ ಬೆಲೆ ದಿಢೀರ್​ ಏರಿಕೆ: ಕಟ್ ಮಾಡದಿದ್ದರೂ ಗ್ರಾಹಕರಲ್ಲಿ ಕಣ್ಣೀರು ತರಿಸಿದ ದರ

August 24, 2026

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಸಂಗ್ರಾಮ: 3 ದಿಕ್ಕಿನಲ್ಲೂ ವಿಧಾನಸೌಧ ಮುತ್ತಿಗೆಗೆ ಪ್ಲಾನ್

August 24, 2026
1 2 3 … 2,071 Next
Automatic YouTube Gallery

ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ

ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ವಿವಿಧ ಸ್ಪರ್ಧೆಗಳು

ಸಭಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ ಸೇರಿದಂತೆ ವಿವಿಧ ಭಜನಾ ಸಂಕೀರ್ತನೆಗಳು

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ
Now Playing
ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ...
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ವಿವಿಧ ಸ್ಪರ್ಧೆಗಳು

ಸಭಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ ಸೇರಿದಂತೆ ವಿವಿಧ ಭಜನಾ ಸಂಕೀರ್ತನೆಗಳು

📍 Ullal | Dakshina Kannada | Coastal ...
Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಶಿಬಿರದಲ್ಲಿ ಬಟ್ಟೆಯ ಚೀಲಗಳನ್ನು ವಿತರಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಸಮಾಜದ ಸಂದೇಶ..!!
Now Playing
ಶಿಬಿರದಲ್ಲಿ ಬಟ್ಟೆಯ ಚೀಲಗಳನ್ನು ವಿತರಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಸಮಾಜದ ಸಂದೇಶ..!!
ಹಸಿರು ದಳ ಮಂಗಳೂರು, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು ಉಳ್ಳಾಲ ...
ಹಸಿರು ದಳ ಮಂಗಳೂರು, ಎ.ಜೆ. ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಂಗಳೂರು
ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ತೊಕ್ಕೊಟ್ಟು ಹಾಗೂ ಲಯನ್ಸ್ ಕ್ಲಬ್ ಅಮ್ಚೂರು ಇವರ ಸಂಯುಕ್ತ ಆಶ್ರಯ;

ತ್ಯಾಜ್ಯ ಕಾರ್ಮಿಕರಿಗಾಗಿ ಆರೋಗ್ಯ ತಪಾಸಣಾ ಶಿಬಿರ

📍 Ullal | Dakshina ...
Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version