ಮಂಗಳೂರು: ಖ್ಯಾತ ಶಸ್ತ್ರಚಿಕಿತ್ಸಾ ತಜ್ಞ ಹಾಗೂ ಪ್ರಾಧ್ಯಾಪಕರಾದ ಡಾ. ರಾಜೇಶ್ ಬಲ್ಲಾಳ್ ಅವರು ನಿಧನರಾಗಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ ಡಾ. ರಾಜೇಶ್ ಬಲ್ಲಾಳ್ ಅವರು ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ (IMA) ಮಾಜಿ ಅಧ್ಯಕ್ಷರು ಹಾಗೂ AMCಯ ಮಾಜಿ ಅಧ್ಯಕ್ಷರು ಆಗಿದ್ದರು. ಅವರು ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಡಾ. ರಾಜೇಶ್ ಬಲ್ಲಾಳ್ ಅವರ ನಿಧನಕ್ಕೆ ವೈದ್ಯಕೀಯ ಕ್ಷೇತ್ರದ ಗಣ್ಯರು, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಬಂಧುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆಯಿಂದ ಕುಟುಂಬಸ್ಥರು ಹಾಗೂ ವೈದ್ಯಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ.