ವಿಟ್ಲ, ಆ. 25 : ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೋಟಿಕೆರೆ ಎಂಬಲ್ಲಿ ನಡೆದಿದೆ. ಮೃತರನ್ನು ವಿಟ್ಲ ಕಸಬಾ ದ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಎಂಬವರ ಪುತ್ರ ಎಸ್ ಸಿ ಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್(32) ಎಂದು ಗುರುತಿಸಲಾಗಿದೆ.
ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು ಸ್ಥಳೀಯರು ಕೂಡಲೇ ಮೇಲಕ್ಕೆತ್ತಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಆಗಲಿದ್ದಾರೆ.