ಕೊಲ್ಲೂರು, ಆ. 26 : ಮೂರ್ತ ವಿಸರ್ಜನೆ ಮಾಡುತ್ತಿದ್ದ ಲಾರಿ ಕ್ಲಿನರ್ ಕುಸಿದು ಬಿದ್ದು ಮೃತಪಟ್ಟ ಘಟನೆ ಕೊಲ್ಲೂರು ಸಮೀಪದ ಜಡ್ಕಲ್ ಗ್ರಾಮದ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ದಾವಣಗೆರೆ ಜಿಲ್ಲೆಯ ಗಣೇಶ್(45) ಎಂದು ಗುರುತಿಸಲಾಗಿದೆ.
ಇವರು ಕಳೆದ 4 ವರ್ಷಗಳಿಂದ ಶಿವಮೊಗ್ಗ ಜಿಲ್ಲೆಯ ಕುಂಶಿ ಗ್ರಾಮದ ಶಿವು ಕುಮಾರ ಎಂಬವರ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದರು. ಮಂಗಳೂರಿನಿಂದ ಲಾರಿಯಲ್ಲಿ ಬರುತ್ತಿದ್ದಾಗ ದಾರಿ ಮಧ್ಯೆ ಮೂತ್ರ ವಿಸರ್ಜನೆಗಾಗಿ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದ್ದು, ಗಣೇಶ್ ಮೂತ್ರ ವಿಜರ್ಸನೆ ಮಾಡುತ್ತಿದ್ದಾಗ ಅಲ್ಲಿಯೇ ಕುಸಿದು ಬಿದ್ದು ಮೃತಪಟ್ಟರು ಎಂದು ತಿಳಿದು ಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.