ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ವಿಶ್ವ ಬಿಲ್ಲವ ಮಹಿಳಾ ಮಂಡಳಿ ವತಿಯಿಂದ ಆ.28ರಂದು ಬೆಳಗ್ಗೆ 8ರಿಂದ 9 ಗಂಟೆಯವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಲಿದೆ.
ಪೂಜೆಯ ಬಳಿಕ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲ ಮಹಿಳೆಯರಿಗೆ ಬಾಗಿನ ವಿತರಣೆ ನಡೆಯಲಿದೆ ಎಂದು ವಿಶ್ವ ಬಿಲ್ಲವ ಮಹಿಳಾ ಮಂಡಳಿಯ ಸಂಸ್ಥಾಪಕರು ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಉಪಾಧ್ಯಕ್ಷರಾದ ಉರ್ಮಿಳಾ ರಮೇಶ್ ಕುಮಾರ್ ತಿಳಿಸಿದ್ದಾರೆ.
ವರಮಹಾಲಕ್ಷ್ಮೀ ಪೂಜೆ ಹಾಗೂ ನಾರಾಯಣಗುರು ಜಯಂತಿ ಕಾರ್ಯಕ್ರಮಕ್ಕೆ ಮಾಧ್ಯಮ ಮಿತ್ರರನ್ನು ಆತ್ಮೀಯವಾಗಿ ಆಹ್ವಾನಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

