ಉಳ್ಳಾಲ ಹೋಬಳಿ (ಎ)ಮಟ್ಟದ ಖೋ-ಖೋ ಪಂದ್ಯಾವಳಿಯ ಅಂಡರ್-14 ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಕೋಟೆಕಾರ್‌ನ ಮಾರ್ಕಝುಲ್ ಹಿದಾಯ ಆಂಗ್ಲ ಮಾಧ್ಯಮ ಶಾಲೆ ಪ್ರಥಮ ಸ್ಥಾನ ಪಡೆದು ಗಮನಾರ್ಹ ಸಾಧನೆ ಮಾಡಿದೆ.
ವಿದ್ಯಾರ್ಥಿಗಳ ಈ ಅತ್ಯುತ್ತಮ ಸಾಧನೆಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ಹಮೀದ್ ತಲಪಾಡಿ ಅವರ ಮಾರ್ಗದರ್ಶನ ಹಾಗೂ ತರಬೇತಿ ಮಹತ್ವದ ಪಾತ್ರ ವಹಿಸಿದೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಸಂಚಾಲಕರಾದ ಎನ್ ಎಸ್ ಉಮರ್ ಮಾಸ್ಟರ್,ಆಡಳಿತ ಮಂಡಳಿ, ಶಿಕ್ಷಕರ ವೃಂದ ಹಾಗೂ ವಿದ್ಯಾರ್ಥಿಗಳ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಲಾಯಿತು. ಮುಂದಿನ ಹಂತದ ಪಂದ್ಯಾವಳಿಗಳಲ್ಲಿಯೂ ಶಾಲೆ ಇನ್ನಷ್ಟು ಯಶಸ್ಸು ಸಾಧಿಸಲಿ ಎಂದು ಶುಭ ಹಾರೈಸಲಾಗಿದೆ.