Site icon Ullalavani

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ

ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ ವತಿಯಿಂದ ಆಗಸ್ಟ್‌ 30ರಂದು ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.



ಬ್ಯಾಂಕಿನ ಸಭಾಂಗಣದಲ್ಲಿ ಬೆಳಗ್ಗೆ 9-30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರಾದ ಡಾ| ದೇವಿಪ್ರಸಾದ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್‌ ಸಚಿವ ಯು.ಟಿ ಖಾದರ್‌ ಅವರನ್ನು ಸನ್ಮಾನಿಸಲಾಗುವುದು. ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ ಅಧ್ಯಕ್ಷರಾದ ಕೃಷ್ಣ ಶೆಟ್ಟಿ, ಕೆಳಗಿನ ಕೋಟೆಕಾರುಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮಾಲಿನಿ, ಉಳ್ಳಾಲ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷರಾದ ದೇವಕಿ ಆರ್. ಉಳ್ಳಾಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬ್ಯಾಂಕಿನ ಉಪಾಧ್ಯಕ್ಷರಾದ ಕೆ.ಬಿ. ಅಬುಸಾಲಿ ಕಿನ್ಯಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ್ ಉಪಸ್ಥಿತರಿರಲಿದ್ದಾರೆ.
ನಿರ್ದೇಶಕರಾದ ಗಂಗಾಧರ್ ಯು, ಕೆ. ಕೃಷ್ಣಪ್ಪ ಸಾಲಿಯಾನ್, ಉದಯಕುಮಾರ್ ಶೆಟ್ಟಿ, ಅರುಣ್ ಕುಮಾರ್ ಯು, ರಾಘವ ಆರ್ ಉಚ್ಚಿಲ್, ರಾಘವ ಸಿ ಉಚ್ಚಿಲ್, ಸುರೇಖಾ ಚಂದ್ರಹಾಸ್, ಸುನೀತಾ ಲೋಬೊ, ಕೃಷ್ಣಪ್ಪ, ಬಾಬು ನಾಯ್ಕ, ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಪ್ರತಿನಿಧಿ ಕಿರಣ್ ಕುಮಾರ್ ಶೆಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ.

Exit mobile version