Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಕೋಟೆಕಾರು ಬ್ಯಾಂಕಿನಿಂದ ರೈತರು, ಅವರ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯ : ಸಚಿವ ಯು.ಟಿ ಖಾದರ್‌

UllalaVaniBy UllalaVaniAugust 31, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಿಂದ ಜನಸಾಮಾನ್ಯರಿಗೆ ಉಪಯುಕ್ತವಾಗುವ ಹಾಗೂ ಸಮಾಜಕ್ಕೆ ಅರ್ಥಪೂರ್ಣವಾಗುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಿದೆ. ರೈತರು ದೇಶಕ್ಕೆ ನೀಡುತ್ತಿರುವ ಕೊಡುಗೆ ಅಪಾರವಾಗಿದ್ದು, ಬಡವರು ಹಾಗೂ ಕೃಷಿಗೆ ವಿಶೇಷ ಮಹತ್ವ ನೀಡಬೇಕಾಗಿದೆ. ಇಂದಿನ ಯುವಜನಾಂಗಕ್ಕೆ ಕೃಷಿಯ ಮಹತ್ವವನ್ನು ತಿಳಿಸಿಕೊಡುವುದು ರೈತರಿಗೆ ನೀಡುವ ದೊಡ್ಡ ಗೌರವವಾಗಿದೆ . ಅದನ್ನು ಬ್ಯಾಂಕ್‌ ಆಡಳಿತ ಮಂಡಳಿ ನಿರಂತರವಾಗಿ ನಡೆಸುತ್ತಾ ಬಂದಿದೆ. ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್‌ ಸಚಿವ ಯು.ಟಿ. ಖಾದರ್‌ ಹೇಳಿದರು.

ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನ ವತಿಯಿಂದ ಬ್ಯಾಂಕ್ ನ ಪ್ರಧಾನ‌ ಕಚೇರಿಯ ಸಭಾಂಗಣದಲ್ಲಿ ಭಾನುವಾರ ನಡೆದ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಒಂದು ಕಾಲದಲ್ಲಿ ದೇಶದಲ್ಲಿ ಆಹಾರದ ಕೊರತೆ ಎದುರಾಗಿತ್ತು. ಹಡಗುಗಳಲ್ಲಿ ಆಹಾರ ಧಾನ್ಯಗಳನ್ನು ತರಿಸಿಕೊಂಡು ಜನರಿಗೆ ವಿತರಿಸುವ ಪರಿಸ್ಥಿತಿಯೂ ಇತ್ತು. ಅಕ್ಕಿ ಸರಬರಾಜಿನಲ್ಲಿ ಸಮಸ್ಯೆ ಉಂಟಾದ ಸಂದರ್ಭಗಳಲ್ಲಿ ಜನರ ಸಂಕಷ್ಟವನ್ನು ನಿವಾರಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿತ್ತು . ತಂದೆ ಶಾಸಕರಾಗಿದ್ದ ಅವಧಿಯಲ್ಲಿ ಮನೆಮುಂದೆ ಎಡರಂಗ ಚಳವಳಿಗಳು ಅಕ್ಕಿ ಕೊಡಿ ಇಲ್ಲವಾದರೆ ರಾಜೀನಾಮೆ ಕೊಡಿ ಅನ್ನುವ ಘೋಷಣೆ ಇಂದಿಗೂ ನೆನಪಿದೆ. ಜವಾಹಾರ್‌ ಲಾಲ್‌ ನೆಹರು ರವರು ದೇಶದಲ್ಲಿ ನೀರಾವರಿ ಯೋಜನೆಗಳಿಗೆ ಉತ್ತೇಜನ ನೀಡುವ ಮೂಲಕ ಕೃಷಿ ಅಭಿವೃದ್ಧಿಗೆ ಆದ್ಯತೆ ನೀಡಲಾಯಿತು. ಹಸಿರು ಕ್ರಾಂತಿಯ ಪರಿಣಾಮ ಆಹಾರ ಉತ್ಪಾದನೆ ಹೆಚ್ಚಾಗಿತ್ತು. ಆದರೂ ಭತ್ತ ಕೃಷಿಯಲ್ಲಿ ಕೊರತೆಯಿತ್ತು. ಆದರೆ ಇಂದಿರಾ ಗಾಂಧಿ ಪ್ರಧಾನಿಯಾದ ನಂತರ ರೈತರು ದೇಶದ ಆಹಾರ ಭದ್ರತೆಗೆ ನೀಡಿರುವ ಕೊಡುಗೆಯನ್ನು ಎಂದಿಗೂ ಮರೆಯಬಾರದು. ಬಡವರಿಗೆ ಕೈಗೆಟುಕುವ ದರದಲ್ಲಿ ಆಹಾರ ಧಾನ್ಯ ದೊರೆಯುವಂತೆ ನ್ಯಾಯಬೆಲೆ ಅಂಗಡಿಗಳ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಇಂತಹ ಯೋಜನೆಗಳು ಜನಸಾಮಾನ್ಯರಿಗೆ ನೆರವಾಗಿವೆ. ಅದೇ ರೀತಿ ವಿದ್ಯಾರ್ಥಿಗಳು ಮತ್ತು ಮಕ್ಕಳನ್ನು ಪ್ರೋತ್ಸಾಹಿಸುವ ಕಾರ್ಯ ಶ್ಲಾಘನೀಯವಾಗಿದ್ದು, ಮಕ್ಕಳ ಪ್ರತಿಭೆಯನ್ನು ಗುರುತಿಸಿ ಅವರಿಗೆ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕು . ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಕಾಳಜಿ ವಹಿಸಬೇಕು. ನಾಲಿಗೆಗೆ ರುಚಿ ನೀಡುವ ಆಹಾರಕ್ಕಾಗಿ ಆರೋಗ್ಯವನ್ನು ಹಾಳು ಮಾಡಿಕೊಳ್ಳಬಾರದು. ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿಯಿಂದ ಮುಂದಿನ ದಿನಗಳಲ್ಲಿ ಕ್ಯಾನ್ಸರ್ ಸೇರಿದಂತೆ ಹಲವು ಗಂಭೀರ ಕಾಯಿಲೆಗಳ ಅಪಾಯ ಹೆಚ್ಚಾಗಬಹುದು. ಆದ್ದರಿಂದ ರುಚಿಗಿಂತ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದು ಅವರು ಸಲಹೆ ನೀಡಿದರು. ಜೀವನದಲ್ಲಿ ಕಷ್ಟಗಳು ಎದುರಾದಾಗ ಟೆನ್ಷನ್ ಮಾಡಿಕೊಳ್ಳದೆ ಧೈರ್ಯದಿಂದ ಸಮಸ್ಯೆಗಳನ್ನು ಎದುರಿಸಬೇಕು. ಒತ್ತಡವನ್ನು ಹೆಚ್ಚಿಸಿಕೊಂಡರೆ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಕಷ್ಟ ಬಂದಾಗ ಆತಂಕಪಡುವ ಬದಲು ಪರಿಹಾರದ ದಾರಿ ಹುಡುಕಬೇಕು . ಜನಪರ ಕಾರ್ಯಕ್ರಮಗಳು ಮುಂದುವರಿಯಲಿ, ರೈತರು ಹಾಗೂ ಬಡವರಿಗೆ ಹೆಚ್ಚಿನ ಗೌರವ ಮತ್ತು ನೆರವು ದೊರೆಯಲಿ ಎಂದು ಅವರು ಆಶಿಸಿದರು.

ಬ್ಯಾಂಕ್ ನ ಕಾರ್ಯವ್ಯಾಪ್ತಿಯ 14ಗ್ರಾಮದ ಪ್ರತಿಯೊಂದು ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಒಟ್ಟು 51ವಿದ್ಯಾರ್ಥಿಗಳಿಗೆ ಗೌರವ ಧನದ ಜೊತೆಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಹಾಗೆಯೇ ಒಂದು ಎಕರೆ ಹಾಗೂ ಎರಡು ಎಕರೆ ಜಮೀನು ಹೊಂದಿರುವ ಭತ್ತದ ಕೃಷಿಕರಿಗೆ ಎಕರೆಗೆ ಐದು ಸಾವಿರ ರೂ. ಗಳಂತೆ ಸಹಾಯ ಧನ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಳ್ಳಾಲ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ದೇವಕಿ ಆರ್. ಉಳ್ಳಾಲ್, ಬ್ಯಾಂಕಿನ ಉಪಾಧ್ಯಕ್ಷ ಕೆ.ಬಿ. ಅಬುಸಾಲಿ ಕಿನ್ಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ ಉಳ್ಳಾಲ್ ಹಾಗೂ ನಿರ್ದೇಶಕರುಗಳಾದ ಗಂಗಾಧರ್ ಯು., ಅರುಣ್ ಕುಮಾರ್ ಯು., ರಾಘವ ಆರ್. ಉಚ್ಚಿಲ್, ರಾಘವ ಸಿ. ಉಚ್ಚಿಲ್, ಸುರೇಖಾ ಚಂದ್ರಹಾಸ್, ಸುನೀತಾ ಲೋಬೊ, ಬಾಬು ನಾಯ್ಕ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು. ಅಧ್ಯಕ್ಷತೆ ವಹಿಸಿದ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ ಅಧ್ಯಕ್ಷ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಸ್ವಾಗತಿಸಿದರು. ಸಂತೋಷ್ ಶೆಟ್ಟಿ ಮಾಡೂರು ಹಾಗೂ ಹರೀಶ್ ನೀಲಿಪಾಲು ಕಾರ್ಯಕ್ರಮ ನಿರೂಪಿಸಿದರು. ನವೀನ್ ಎಲ್. ಸಾಲ್ಯಾನ್ ವಂದಿಸಿದರು.
ಕಾರ್ಯಕ್ರಮದಲ್ಲಿ ನೂತನ ಸಚಿವರಾಗಿ ಆಯ್ಕೆಯಾದ ಯು.ಟಿ. ಖಾದರ್ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

August 31, 2026

ಮಂಗಳೂರು: ಚೂರಿ ಇರಿದು ಅಣ್ಣನನ್ನೇ ಕೊಲೆ ಮಾಡಿದ ತಮ್ಮ

August 31, 2026

ರಾಯರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತ: ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು

August 31, 2026

Comments are closed.

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
suddi

ಭಜನಾ ಮಂದಿರಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

By UllalaVaniAugust 31, 20260

ಕೊಣಾಜೆ: ಮುಲಾರ ಪೂರ್ಣಗಿರಿಯ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದಲ್ಲಿ ಆ.12ರಿಂದ ಸೆ.4ರವರೆಗೆ ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ನಡೆಯುತ್ತಿರುವ 24 ದಿನಗಳ…

ಮಂಗಳೂರು: ಚೂರಿ ಇರಿದು ಅಣ್ಣನನ್ನೇ ಕೊಲೆ ಮಾಡಿದ ತಮ್ಮ

August 31, 2026

ರಾಯರ ತತ್ತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಪ್ರಸ್ತುತ: ಶ್ರೀ ಕೃಷ್ಣ ಶಿವಕೃಪಾ ಕುಂಜತ್ತೂರು

August 31, 2026

ಉರ್ವಾ ಸಂತ ಅಲೋ ಶಿಯಸ್ ಶಾಲೆಯಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

August 31, 2026
1 2 3 … 2,082 Next
Automatic YouTube Gallery

ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್

ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಕುಲಪತಿ ಡಾ.ವಿದ್ಯಾಶಂಕರ ಎಸ್ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್
Now Playing
ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ; ಡಾ.ವಿದ್ಯಾಶಂಕರ ಎಸ್
ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ...
ಪಿ.ಎ.ಎಂಜಿನಿಯರಿoಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭ; ಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ

ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಕುಲಪತಿ ಡಾ.ವಿದ್ಯಾಶಂಕರ ಎಸ್ ಭಾಗಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್
Now Playing
ಕೃಷಿಗೆ ವಿಶೇಷ ಮಹತ್ವ ನೀಡಬೇಕು: ಸಚಿವ ಯು.ಟಿ. ಖಾದರ್
ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ...
ಭತ್ತ ಕೃಷಿಕರಿಗೆ ಎಕರೆಗೆ 5 ಸಾವಿರ ಸಹಾಯಧನ;ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆ: 51 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸಚಿವ ಯು.ಟಿ. ಖಾದರ್‌ಗೆ ಕೋಟೆಕಾರು ಬ್ಯಾಂಕ್‌ನಿoದ ಸನ್ಮಾನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version