
ತೊಕ್ಕೊಟ್ಟು: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನದ ವತಿಯಿಂದ ದಕ್ಷ್ ಪ್ಲೇ ಸ್ಕೂಲ್ ವಿದ್ಯಾರ್ಥಿಗಳಿಗೆ ದಂತ ಕಿಟ್ ವಿತರಣೆ ಹಾಗೂ ಹಲ್ಲಿನ ಸಂರಕ್ಷಣೆಯ ಕುರಿತು ಮಾಹಿತಿ ಕಾರ್ಯಕ್ರಮವನ್ನು ಸೆ. 3ರಂದು ಗುರುವಾರ(ನಾಳೆ) ಬೆಳಗ್ಗೆ 11.30ಕ್ಕೆ ದಕ್ಷ್ ಪ್ಲೇ ಸ್ಕೂಲ್ನಲ್ಲಿ ಆಯೋಜಿಸಲಾಗಿದೆ.
ಖ್ಯಾತ ವೈದ್ಯರು ಹಾಗೂ ಸಾಮಾಜಿಕ ಚಿಂತಕರಾದ ಡಾ. ಮುರಳಿ ಮೋಹನ್ ಚೂಂತಾರು ಅವರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದು, ವಿದ್ಯಾರ್ಥಿಗಳಿಗೆ ಹಲ್ಲಿನ ಆರೋಗ್ಯ, ಹಲ್ಲಿನ ಸಂರಕ್ಷಣೆ ಹಾಗೂ ಸ್ವಚ್ಛತೆಯ ಕುರಿತು ಅಗತ್ಯ ಮಾಹಿತಿಯನ್ನು ನೀಡಲಿದ್ದಾರೆ. ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿ ವಿನಂತಿ

