Site icon Ullalavani

‘ಮಂಗಳೂರು ದಸರಾ ಶ್ರದ್ಧಾಪೂರ್ವಕ ಆಚರಣೆಗೆ ಸಿದ್ಧತೆ; ಉಳ್ಳಾಲದಲ್ಲಿ ಪ್ರಥಮ ಬಾರಿಗೆ ಯುವ ದಸರಾ’- ಸಚಿವ ಯು.ಟಿ. ಖಾದರ್

ಮಂಗಳೂರು, ಸೆ. 02 : ಮಂಗಳೂರು ದಸರಾವನ್ನು ಅತ್ಯಂತ ಶ್ರದ್ಧಾಪೂರ್ವಕ ಹಾಗೂ ವೈಭವದಿಂದ ಆಚರಿಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿಎಂ ಡಿ.ಕೆ. ಶಿವಕುಮಾರ್ ಅವರು ದಸರಾವನ್ನು ನಾಡಿನ ಸಂಸ್ಕೃತಿ ಹಾಗೂ ಪಾರಂಪರಿಕ ಹಿನ್ನೆಲೆಯೊಂದಿಗೆ ಅರ್ಥಪೂರ್ಣವಾಗಿ ನಡೆಸಲು ಸಲಹೆ ನೀಡಿದ್ದಾರೆ. ನಗರದ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥ ಕ್ಷೇತ್ರ, ಮಂಗಳಾದೇವಿ, ಮಾರಿಗುಡಿ, ವೆಂಕಟರಮಣ ದೇವಸ್ಥಾನ ಸೇರಿದಂತೆ ಎಲ್ಲಾ ಪ್ರಮುಖ ದೇವಾಲಯಗಳನ್ನು ಕ್ರೋಢೀಕರಿಸಿಕೊಂಡು ದಸರಾ ಆಚರಿಸಲಾಗುತ್ತಿದೆ. ಇದರ ಭಾಗವಾಗಿ ಈ ಬಾರಿ ಉಳ್ಳಾಲದಲ್ಲಿ ಪ್ರಥಮ ಬಾರಿಗೆ ‘ಯುವ ದಸರಾ’ ಆಯೋಜಿಸಲು ತೀರ್ಮಾನಿಸಲಾಗಿದೆ” ಎಂದು ಹೇಳಿದರು.”ಇದೇ ವೇಳೆ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಪ್ರಸ್ತುತ ದ್ವಿತೀಯ ಹಂತದ ಪರಿಶೀಲನೆ ನಡೆಯುತ್ತಿದ್ದು, ಪಟ್ಟಿಯಿಂದ ಕೇವಲ ಹೆಸರುಗಳನ್ನು ತೆಗೆಯುವುದು ಮಾತ್ರವಲ್ಲದೆ, ಅರ್ಹ ಮತದಾರರ ಹೆಸರು ಸೇರ್ಪಡೆ ಮಾಡುವ ಬಗ್ಗೆಯೂ ಹೆಚ್ಚಿನ ಗಮನ ಹರಿಸುವಂತೆ ಚುನಾವಣಾ ಆಯೋಗದ ಆಯುಕ್ತರಿಗೆ ಮನವಿ ಮಾಡಲಾಗಿದೆ. ಉದ್ಯೋಗ ಅಥವಾ ಶಿಕ್ಷಣಕ್ಕಾಗಿ ವಿದೇಶದಲ್ಲಿ ನೆಲೆಸಿದ್ದಾರೆ ಎಂಬ ನೆಪದಲ್ಲಿ ಮತದಾರರ ಪಟ್ಟಿಯಿಂದ ಯಾರ ಹೆಸರನ್ನೂ ಕೈಬಿಡಬಾರದು, ಅವರಿಗೆ ಸೂಕ್ತ ವಿಶೇಷ ವ್ಯವಸ್ಥೆ ಮಾಡಿ ಮತದಾನದ ಹಕ್ಕು ಕಲ್ಪಿಸಬೇಕು” ಎಂದು ಆಗ್ರಹಿಸಿದರು.

Exit mobile version