ಬೋಳಿಯಾರ್: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾನಿಧಿ ಟ್ರಸ್ಟ್, ಉಳ್ಳಾಲ ತಾಲೂಕು ಹಾಗೂ ಬೋಳಿಯಾರ್ ಗ್ರಾಮ ಪಂಚಾಯಿತಿ ಜಂಟಿ ಆಶ್ರಯದಲ್ಲಿ ‘ಚಿಣ್ಣರ ಚಿಲಿಪಿಲಿ’ ಕಾರ್ಯಾಗಾರವು ಸೆ. 3ರಂದು ಬೋಳಿಯಾರ್ ಮಸೀದಿ ಬಳಿಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀ ಪ್ರಶಾಂತ್ ಕಾಜವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬೋಳಿಯಾರ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸುಧಾರಾಣಿ ಡಿ. ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ, ‘ಚಿಣ್ಣರ ಚಿಲಿಪಿಲಿ’ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಟ್ರಸ್ಟ್ನ ಶ್ರೀ ಸುನಿಲ್ ಕುಮಾರ್ ಬಜಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆರೋಗ್ಯ ನಿರೀಕ್ಷಕಿ ಶ್ರೀಮತಿ ಆಯಿಷಾ ಪೆರ್ನೆ ಅವರು ಮಕ್ಕಳಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಟ್ರಸ್ಟ್ನ ಸ್ಥಾಪಕ ಅಧ್ಯಕ್ಷ ಶ್ರೀ ಯಾದವ ಅಸ್ಸೈಗೋಳಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶ್ರೀಮತಿ ಜುನೈದ ರಂತಡ್ಕ, ಶಾಲೆಯ ಶ್ರೀ ಪ್ರವೀಣ್ ವಿಸ್ಮಯ ಬಜಾಜ್ ಹಾಗೂ ಸರಿಟ ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಚೇತನ ಪಿ. ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ರಮ್ಯಾ ವಂದಿಸಿದರು. ಕುಮಾರಿ ದೀಪಾಲಿ ಕಾರ್ಯಕ್ರಮ ನಿರೂಪಿಸಿದರು.

