ಉಳ್ಳಾಲ: ಭಾರತ್ ಪ್ರೌಢಶಾಲಾ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಹ್ಯಾಂಡ್‌ಬಾಲ್ ಪಂದ್ಯಾಕೂಟದಲ್ಲಿ ಮರ್ಕಝುಲ್ ಹಿದಾಯ ಶಾಲಾ ವಿದ್ಯಾರ್ಥಿಗಳು ಉತ್ತಮ ಸಾಧನೆ ಮೆರೆದಿದ್ದಾರೆ.

14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಯ ಕೀರ್ತಿಯನ್ನು ಎತ್ತರಕ್ಕೇರಿಸಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಮಾರ್ಗದರ್ಶನ ನೀಡಿದ ದೈಹಿಕ ಶಿಕ್ಷಕ ಹಮೀದ್ ತಲಪಾಡಿ ಹಾಗೂ ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಅಧ್ಯಕ್ಷ ಕೆ.ಎಂ. ಅಬ್ದುಲ್ಲ, ಸಂಚಾಲಕ ಹಾಜಿ ಉಮರಬ್ಬ ಮಾಸ್ಟರ್, ಪ್ರಧಾನ ಕಾರ್ಯದರ್ಶಿ ಫಾರೂಕ್ ಯು.ಎಚ್., ಮುಖ್ಯ ಶಿಕ್ಷಕಿ ಹಾಗೂ ಶಿಕ್ಷಕ ವೃಂದ ಅಭಿನಂದಿಸಿ ಶುಭ ಹಾರೈಸಿದರು.


