

ಉಳ್ಳಾಲ: ಕೊಣಾಜೆ ಗ್ರಾಮ ಪಂಚಾಯತ್ಗೆ ಉಡುಪಿ ಜಿಲ್ಲೆಯ ಲೋಕಾಯುಕ್ತ ವಿಭಾಗದ ಇನ್ಸ್ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಲೋಕಾಯುಕ್ತ ವಿಭಾಗದ ಅಧಿಕಾರಿಗಳಾದ ರಾಘವೇಂದ್ರ ಸಾಲಿಗ್ರಾಮ, ಆದರ್ಶ್, ಅರುಣ್ ಕುಮಾರ್ ಹಾಗೂ ಸೂರಜ್ ಕಾಪು ಅವರು ತಂಡದಲ್ಲಿದ್ದು, ಗ್ರಾಮ ಪಂಚಾಯತ್ನ ವಿವಿಧ ದಾಖಲೆಗಳು ಹಾಗೂ ಆಡಳಿತಾತ್ಮಕ ವಿಚಾರಗಳ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.


