
ಇರಾ ಗ್ರಾಮ ಪಂಚಾಯತ್ ಮಾಜಿ ಸದಸ್ಯರೂ ಯುವತಿ ಮಂಡಲ ಇರಾ ಮಾಜಿ ಅಧ್ಯಕ್ಷರಾಗಿ ಹಲವಾರು ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ, ಜಿಲ್ಲಾ ಮಹಿಳಾ ಮಂಡಲ ಒಕ್ಕೂಟದ ಪದಾಧಿಕಾರಿಯಾಗಿದ್ದ, ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸೂತ್ರಬೈಲು ನಿವಾಸಿ ಪದ್ಮಾ ಎಸ್ ರಾವ್ (80 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗ್ರಹದಲ್ಲಿ ನಿಧನರಾದರು.

ಪುತ್ರ ಗುರುರಾಜ್ ಪುತ್ರಿ ವಾಣಿ ಸೊಸೆ ಕಲಾವಿದೆ ಮಂಜುಳಾ ಗುರುರಾಜ್ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ.
ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಹಜ್, ಅಲ್ಪಸಂಖ್ಯಾತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಯು ಟಿ ಖಾದರ್, ಕೆಪಿಸಿಸಿ ಕಾರ್ಯಧ್ಯಕ್ಷರಾದ ಮಂಜುನಾಥ್ ಭಂಡಾರಿ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ ಎಸ್ ಗಟ್ಟಿ,ಬಂಟ್ವಾಳ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಜಲೀಲ್,ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಕ್ ಕುಕ್ಕಾಜೆ, ಅಬ್ದುಲ್ ರಹಿಮಾನ್ ಸಂಪಿಲ, ತುಳಸಿ ಪುರಂದರ ಪೂಜಾರಿ, ವಲಯ ಕಾಂಗ್ರೆಸ್ ಅಧ್ಯಕ್ಷರಾದ ಅಶ್ರಫ್ ಸಂಪಿಲ, ಹಿಂದುಳಿದ ಘಟಕದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅನಿಲ್ ಸೂತ್ರಬೈಲ್ ಮೃತರ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.


