ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಕುಂಪಲದಲ್ಲಿ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ನಿಶಾನ್ ಪೂಜಾರಿ ಅವರು ಮಂಡಲದ ಪದಾಧಿಕಾರಿಗಳೊಂದಿಗೆ ಅಶಕ್ತ ಬಡ ಕುಟುಂಬವೊಂದಕ್ಕೆ ನೆರವು ನೀಡಿದರು.

ಕುಟುಂಬಕ್ಕೆ ಅಗತ್ಯ ಪಡಿತರ ಸಾಮಗ್ರಿಗಳ ಜೊತೆಗೆ ಧನ ಸಹಾಯವನ್ನು ವಿತರಿಸಲಾಯಿತು. ಈ ಮೂಲಕ ಪ್ರಧಾನಿಯವರ ಜನ್ಮದಿನವನ್ನು ಸಮಾಜಮುಖಿ ಕಾರ್ಯದ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಬಡ ಹಾಗೂ ಅಶಕ್ತ ಕುಟುಂಬಗಳ ನೆರವಿಗೆ ಸದಾ ಸ್ಪಂದಿಸುವ ಮೂಲಕ ಸಮಾಜ ಸೇವಾ ಕಾರ್ಯಗಳನ್ನು ಮುಂದುವರಿಸುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

