ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿದ್ದು, ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಎಸ್ ಡಿಪಿಐ ಕಾರ್ಯಕರ್ತರು ಇಂದು ಸಿಎಂ, ಡಿಸಿಎಂ,ಮಂತ್ರಿಗಳಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದು, ಹಲವರನ್ನು ವಶಕ್ಕೆ ಪಡೆಯಲಾಗಿದೆ.
ನಗರದ ಸ್ಟೇಟ್ ಬ್ಯಾಂಕ್ ನ ರಾವ್ ಆಂಡ್ ರಾವ್ ಸರ್ಕಲ್ ಬಳಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಎಸ್ ಡಿಪಿಐ ರಾಜ್ಯ ಮುಖಂಡ ರಿಯಾಝ್ ಕಡಂಬು, ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು, ಮುಖಂಡರಾದ ಮೂನೀಶ್ ಅಲಿ, ಅಶ್ರಫ್ ಅಡ್ಡಿರು ಮೊದಲಾದವರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.