Site icon Ullalavani

ಮಂಗಳೂರಿನ ಪ್ರಜಾ ಸೌಧದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಆರಂಭ

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ರಾಜ್ಯ ಸಚಿವ ಸಂಪುಟ ಸಭೆಯು ಮಂಗಳೂರಿನ ಪಡೀಲ್‌ನ ಪ್ರಜಾ ಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಆರಂಭವಾಗಿದೆ.


ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸಚಿವರು ಭಾಗವಹಿಸಿದ್ದು, ಕರಾವಳಿ ಮತ್ತು ಮಲೆನಾಡು ಭಾಗದ ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.
ಸಭೆಗೆ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರಿಗೆ ಪ್ರಜಾ ಸೌಧದಲ್ಲಿ ಪೂರ್ಣಕುಂಭಸ್ವಾಗತ ನೀಡಲಾಯಿತು.
ಕರಾವಳಿ ಪ್ರದೇಶದ ಅಭಿವೃದ್ಧಿ, ಪ್ರವಾಸೋದ್ಯಮ, ಮೂಲಸೌಕರ್ಯ, ಶಿಕ್ಷಣ, ಆರೋಗ್ಯ ಹಾಗೂ ಇತರೆ ಪ್ರಾದೇಶಿಕ ವಿಚಾರಗಳಿಗೆ ಸಂಬಂಧಿಸಿದ ಮಹತ್ವದ ನಿರ್ಧಾರಗಳನ್ನು ಈ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳುವ ನಿರೀಕ್ಷೆಯಿದೆ.

Exit mobile version