ಪಜೀರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ಪಜೀರು ಕಂಬಳಪದವು ಸಮೀಪ ಗುರುವಾರ ತಡರಾತ್ರಿ ನಡೆದಿದೆ.ಬೋಳಿಯಾರು ನಿವಾಸಿ ಸತೀಶ್ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸತೀಶ್ ಅವರೊಂದಿಗೆ ಬೈಕ್‌ನಲ್ಲಿದ್ದ ಮೊಹಮ್ಮದ್ ಇಸಾಕ್ ಅವರಿಗೂ ಗಾಯಗಳಾಗಿವೆ.
ಮತ್ತೊಂದು ಹಿಮಾಲಯನ್ ಬೈಕ್‌ನಲ್ಲಿದ್ದ ಇಬ್ಬರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.ಮುಡಿಪು –ಪಜೀರು ಮಾರ್ಗವಾಗಿ ಕೊಣಾಜೆ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಎದುರಿನಿಂದ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.