ಮಂಗಳೂರು: ಪಿ.ಎ. ಪ್ರಥಮ ದರ್ಜೆ ಕಾಲೇಜು, ನಡುಪದವು, ಮಂಗಳೂರು ಇದರ NSS ಹಾಗೂ ರೋವರ್ಸ್ ಮತ್ತು ರೆಂಜರ್ಸ್ ಘಟಕಗಳ ವತಿಯಿಂದ ಸೆ. 21ರಂದು ಉಳ್ಳಾಲ ಬೀಚ್ನಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.

ಪರಿಸರ ಸಂರಕ್ಷಣೆ, ಸ್ವಚ್ಛತೆಯ ಮಹತ್ವ ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛವಾಗಿಡುವ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಅಭಿಯಾನದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡು ಬೀಚ್ ಪ್ರದೇಶವನ್ನು ಸ್ವಚ್ಛಗೊಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫ್ರಾಜ್ ಜೆ. ಹಾಶಿಮ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಪ್ರೋತ್ಸಾಹ ನೀಡಿದರು. NSS ಅಧಿಕಾರಿಗಳು ಹಾಗೂ ಉಪನ್ಯಾಸಕರಾದ ಚೈತ್ರ, ಇತಾಶ್ರೀ ಮತ್ತು ಗುರುರಾಜ್ ಅವರು ವಿದ್ಯಾರ್ಥಿಗಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

ಉಳ್ಳಾಲ ನಗರಸಭೆಯ ಹೆಲ್ತ್ ಆಫೀಸರ್ ರವಿ ಕೃಷ್ಣ, ನಿಕಟಪೂರ್ವ ಕೌನ್ಸಿಲರ್ಗಳಾದ ಅಸ್ಗರ್ ಆಲಿ ಮತ್ತು ಬಶೀರ್, ಸಮಾಜ ಸೇವಕರಾದ ಹಮೀದ್ ಉಳ್ಳಾಲ ಹಾಗೂ ಶಿಹಾಬ್ ರೆಡ್ ಲೈನ್ ಉಪಸ್ಥಿತರಿದ್ದು, ಅಭಿಯಾನಕ್ಕೆ ಬೆಂಬಲ ನೀಡಿದರು.
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿರ್ಮಾಣದಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದ್ದು, ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ಅಭಿಯಾನ ಸಾರಿತು. ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯೊಂದಿಗೆ ನಡೆದ ಕಾರ್ಯಕ್ರಮವು ‘ಸ್ವಚ್ಛ ಪರಿಸರ–ಆರೋಗ್ಯಕರ ಸಮಾಜ’ ಎಂಬ ಆಶಯವನ್ನು ಮತ್ತಷ್ಟು ಬಲಪಡಿಸಿತು.

