ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಪಿಎಂಶ್ರೀ ಉಚ್ಚಿಲಗುಡ್ಡೆ ಶಾಲೆಯ ಮುಖ್ಯ ಶಿಕ್ಷಕ ಹರೀಶ್ ಕುಮಾರ್ ಹಾಗೂ ಬದ್ರಿಯಾ ನಗರದ ಶಿಕ್ಷಕಿ ಫ್ಲೇವಿ ಜೆಸಿಂತಾ ಮಿರಂದ ಅವರನ್ನು ಮಂಗಳೂರು ದಕ್ಷಿಣ ವಲಯ ಶಿಕ್ಷಕರ ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಧಾಕೃಷ್ಣ ರಾವ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಗದೀಶ್ ಶೆಟ್ಟಿ ಅವರು ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಅಭಿನಂದಿಸಿ ಶುಭಹಾರೈಸಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಮೋಹನ್ ಶಿರ್ಲಾಲ್ ಕಾರ್ಯಕ್ರಮ ನಿರೂಪಿಸಿದರು. ಚಂದ್ರಶೇಖರ್ ವಂದಿಸಿದರು.

