ಉಳ್ಳಾಲ: ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಬೆಂಗಳೂರು, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಸಂಜೀವಿನಿ ಒಕ್ಕೂಟ ಕುರ್ನಾಡು ಪಂಚಾಯತ್ ಇವರ ಜಂಟಿ ಆಶ್ರಯದಲ್ಲಿ ತ್ಯಾಜ್ಯ ನಿರ್ವಹಣೆ, ಮಳೆನೀರು ಇಂಗಿಸುವಿಕೆ ಹಾಗೂ ಸೌರಶಕ್ತಿ ಯೋಜನೆಗಳ ಬಗ್ಗೆ ಕಾರ್ಯಗಾರ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

MGIRED ಸಂಸ್ಥೆ ಬೆಂಗಳೂರು ಇದರ ಅಧಿಕಾರಿ ಶ್ರೀ ರವಿಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಕಾರ್ಯಕ್ರಮದ ಮಹತ್ವ ತಿಳಿಸಿದರು.
NRLM ಉಳ್ಳಾಲ ತಾಲೂಕಿನ ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀ ವಿಧಿಶ್ ಮಾತನಾಡುತ ಪ್ರತಿ ಮನೆಯಲ್ಲಿ ನಾವು ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸಿ ಪರಿಸರ ಸ್ನೇಹಿ ಜೀವನಶೈಲಿ ಅಳವಡಿಸಿ ಉತ್ತಮ ಹೆಜ್ಜೆಯಿರಿಸಿ ಮಾದರಿ ಗ್ರಾಮ ಮಾಡಲು ಪಣ ತೊಡಬೇಕು ಎಂದರು.
ಕಾರ್ಯಕ್ರಮದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಇದರ ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀ ಜೀವನ್ ಕೊಲ್ಯ , ಸೆಲ್ಕೋ ಸಂಸ್ಥೆ ಅಧಿಕಾರಿ ಶ್ರೀ ರವೀನಾ ಬಂಗೇರ, ಶ್ರೀ ಅರುಣ್ ಪಟವರ್ಧನ್ ಹಾಗೂ
ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ನಳಿನಿ ಎ. ಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀಮತಿ ಮಮತಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.

