ಕೋಟೆಕಾರು ಪಟ್ಟಣ ಪಂಚಾಯತ್ನಲ್ಲಿ ಸಂಭ್ರಮದಿಂದ ‘ಪೌರಕಾರ್ಮಿಕರ ದಿನಾಚರಣೆ’ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ ಪೌರಕಾರ್ಮಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು . ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಹಾಗೂ ಸ್ವಚ್ಛತಾ ವಿಭಾಗದ ಎಲ್ಲಾ ಸಿಬ್ಬಂದಿಗಳನ್ನು ಗೌರವಿಸಿ, ಸನ್ಮಾನಿಸಲಾಯಿತು. ಪೌರಕಾರ್ಮಿಕರಿಗೆ ಗೌರವಧನ ಹಾಗೂ ಆರೋಗ್ಯ ವಿಮೆ ಮತ್ತು ಸಮವಸ್ತ್ರ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಿವ್ಯಾ ಸತೀಶ್ ಶೆಟ್ಟಿ ಅವರು, “ನಗರದ ಸ್ವಚ್ಛತೆಯ ರೂವಾರಿಗಳಾದ ಪೌರಕಾರ್ಮಿಕರ ಸೇವೆ ಅತ್ಯಂತ ಶ್ರೇಷ್ಠವಾದದ್ದು,” ಎಂದು ಅವರ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್ ಉಪಾಧ್ಯಕ್ಷರಾದ ಪ್ರವೀಣ್ ಬಗಂಬಿಲ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಧೀರಜ್ ಕುಸಾಲ್ ನಗರ, ಪಟ್ಟಣ ಪಂಚಾಯತ್ ಸದಸ್ಯರಾದ ಶ್ರೀ ಹರೀಶ್ ರಾವ್, ಸುಜಿತ್ ಮಾಡೂರು ಇಸಾಕ ಐ , ಶ್ರೀಮತಿ ಭವಾನಿ ದೇವದಾಸ, ಶ್ರೀಮತಿ ಅನಿತಾ,ಉದಯ ಕುಮಾರ ಶೆಟ್ಟಿ ಹಾಗೂ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಶ್ರೀಮತಿ ಮಾಲಿನಿ ಅವರು ಉಪಸ್ಥಿತರಿದ್ದು, ಪೌರಕಾರ್ಮಿಕರನ್ನು ಉದ್ದೇಶಿಸಿ ಸ್ಪೂರ್ತಿದಾಯಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೋಟೆಕಾರು ಪಟ್ಟಣ ಪಂಚಾಯತ್ ಪಟ್ಟಣ ಪಂಚಾಯತ್ನ ಸಮಸ್ತ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು. ಶ್ರೀವಿಕ್ರಮ್ ಅವರು ಕಾರ್ಯಕ್ರಮವನ್ನು ನಿರೂಪಿಸಿ, ನಿರ್ವಹಿಸಿದರು.

