Site icon Ullalavani

ಡೆತ್ ನೋಟ್ ಬರೆದಿಟ್ಟು ಸಹಕಾರಿ ಸಂಘದ ಸಿಇಒ ಆತ್ಮಹತ್ಯೆ…! : ಕಾರಣವೇನು..?

ಕುಂದಾಪುರ: ಕೋಟೇಶ್ವರದ ಜೋಗಿ ವಿವಿದೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ರಾಘವೇಂದ್ರ ಜೋಗಿ (48) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆಪ್ಟೆಂಬರ್‌ 24ರಂದು ನಡೆದಿದೆ.

ಕುಂದಾಪುರ ತಾಲೂಕಿನ ಕಟ್‌ ಬೇಲ್ತೂರು ನಿವಾಸಿಯಾಗಿದ್ದ ರಾಘವೇಂದ್ರ ಜೋಗಿ ಅವರು ಕಳೆದ 18 ವರ್ಷಗಳಿಂದ ಕೋಟೇಶ್ವರದ ಜೋಗಿ ವಿವಿದೋದ್ದೇಶ ಸಹಕಾರಿ ಸಂಘದಲ್ಲಿ ಸಿಇಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಸೆಪ್ಟೆಂಬರ್‌ 24ರಂದು ಮಧ್ಯಾಹ್ನ ತಮ್ಮ ನಿವಾಸದ ಸಮೀಪ ರಾಘವೇಂದ್ರ ಜೋಗಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ಅವರು ಪತ್ನಿ ಸುಕನ್ಯಾ ಹಾಗೂ ಪುತ್ರಿಯೊಂದಿಗೆ ವಾಸವಾಗಿದ್ದರು.

ಪತಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ಗಮನಿಸಿದ ಪತ್ನಿ ಸುಕನ್ಯಾ ಅವರು ತಕ್ಷಣ ರಾಘವೇಂದ್ರ ಜೋಗಿ ಅವರ ಸಹೋದರ ರಾಜೇಶ್‌ ಜೋಗಿ ಅವರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳೀಯರ ನೆರವಿನೊಂದಿಗೆ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾಘವೇಂದ್ರ ಜೋಗಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೂ ಮುನ್ನ ಅವರು ಡೆತ್ ನೋಟ್ ಬರೆದಿಟ್ಟಿದ್ದರು ಎನ್ನಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ತನಿಖೆಯಿಂದ ತಿಳಿದುಬರಬೇಕಾಗಿದೆ.

Exit mobile version