Site icon Ullalavani

ಮಂಗಳೂರು: ‘ಮಾರಕ ಕಾಯಿಲೆಗಳ ಔಷಧ ಬೆಲೆ ನಿಯಂತ್ರಣಕ್ಕೆ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ’- ಯು.ಟಿ. ಖಾದರ್ ಮಾಹಿತಿ

ಮಂಗಳೂರು: ಕ್ಯಾನ್ಸರ್, ಮೂತ್ರಪಿಂಡ ವೈಫಲ್ಯ ಮತ್ತು ಏಡ್ಸ್ ನಂತಹ ಮಾರಕ ಕಾಯಿಲೆಗಳ ಚಿಕಿತ್ಸೆಯಲ್ಲಿ ಬಳಸುವ ದುಬಾರಿ ಔಷಧಿಗಳ ಮೂಲ ಖರೀದಿ ಬೆಲೆ ಹಾಗೂ ಗರಿಷ್ಠ ಮಾರಾಟ ಬೆಲೆ ನಡುವೆ ಇರುವ ಭಾರಿ ವ್ಯತ್ಯಾಸವನ್ನು ನಿಯಂತ್ರಿಸುವಂತೆ ಕೇಂದ್ರ ಆರೋಗ್ಯ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಮಾಹಿತಿ ನೀಡಿದ್ದಾರೆ.


ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೆಲವು ಪ್ರಮುಖ ಜೀವ ರಕ್ಷಕ ಔಷಧಿಗಳ ಎಂ.ಆರ್.ಪಿ ದರ ಅವುಗಳ ಮೂಲ ಖರೀದಿ ಬೆಲೆ ಹೆಚ್ಚಿದ್ದು, ಸಾಮಾನ್ಯ ಜನರಿಗೆ ತೊಂದರೆಯಾಗಿದೆ. ಹೀಗಾಗಿ ಔಷಧಿಗಳ ಉತ್ಪಾದನಾ ವೆಚ್ಚ, ಖರೀದಿ ಬೆಲೆ ಮತ್ತು ವಿಧಿಸಲಾಗುತ್ತಿರುವ ಎಂಆರ್‌ಪಿ ಕುರಿತು ತನಿಖೆ ನಡೆಸಲು ರಾಷ್ಟ್ರೀಯ ಮಟ್ಟದಲ್ಲಿ ತಜ್ಞರ ಸಮಿತಿಯನ್ನು ರಚಿಸಬೇಕು. ಅಲ್ಲದೆ, ರಾಷ್ಟ್ರೀಯ ಔಷಧೀಯ ಬೆಲೆ ಪ್ರಾಧಿಕಾರ ಮತ್ತು ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿ ಅಡಿಯಲ್ಲಿ ಈ ಔಷಧಿಗಳನ್ನು ತಂದು ಲಾಭದ ಮಿತಿಯನ್ನು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು” ಎಂದು ಮನವಿ ಮಾಡಲಾಗಿದೆ ಎಂದರು.”ಅಕ್ಟೋಬರ್ ಅಂತ್ಯದಲ್ಲಿ ಕೇಂದ್ರ ಸಚಿವರು ಹಾಗೂ ರಾಜ್ಯಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಆಹಾರ ಮತ್ತು ಔಷಧ ಸುರಕ್ಷತಾ ಅಧಿಕಾರಿಗಳ ಸಭೆಯನ್ನು ಬೆಂಗಳೂರಿನಲ್ಲೇ ನಡೆಸಲು ತೀರ್ಮಾನಿಸಲಾಗಿದೆ. 2030ರ ವೇಳೆಗೆ ಸಾರ್ವಜನಿಕರ ಉಪ್ಪಿನ ಸೇವನೆಯನ್ನು ಶೇಕಡಾ 30ರಷ್ಟು ಕಡಿಮೆ ಮಾಡುವ ಗುರಿ ಹೊಂದಲಾಗಿದೆ” ಎಂದು ತಿಳಿಸಿದರು.

Exit mobile version