Site icon Ullalavani

ಉಡುಪಿ: ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು

ಉಡುಪಿ, ಸೆ.30 : ಪೆಟ್ರೋಲ್ ಬಂಕ್ ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸ್ ಒಂದನ್ನು ಕಳ್ಳರು ಕದ್ದೊಯ್ದಿರುವ ಘಟನೆ ಉಡುಪಿಯ ಕಿನ್ನಿಮುಲ್ಕಿಯಲ್ಲಿ ನಡೆದಿದ್ದು, ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರದ ಕಟ್‌ಬೆಳ್ತೂರು ನಿವಾಸಿ ಕೃಷ್ಣ (51) ಎಂಬುವರು ‘ಶ್ರೀ ದುರ್ಗಾಂಬಾ’ ಖಾಸಗಿ ಬಸ್ಸಿನ ನಿರ್ವಾಹಕರಾಗಿದ್ದು, ರಾಯಿನ್ ಉಚ್ಚಿಲ ಎಂಬುವರು ಚಾಲಕರಾಗಿದ್ದಾರೆ. ಸೆಪ್ಟೆಂಬರ್ 28ರಂದು ರಾತ್ರಿ ಸುಮಾರು 9:48ಕ್ಕೆ ಬಸ್ಸನ್ನು ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ಪಾರ್ಕ್ ಮಾಡಲಾಗಿತ್ತು. ರಾತ್ರಿ 10 ಗಂಟೆಯ ಸುಮಾರಿಗೆ ನಿರ್ವಾಹಕ ಕೃಷ್ಣ ಅವರು ಚಾಲಕನೊಂದಿಗೆ ಸ್ಕೂಟರ್‌ನಲ್ಲಿ ತೆರಳಿದ್ದರು.ಸೆಪ್ಟೆಂಬರ್ 29ರಂದು ಬೆಳಿಗ್ಗೆ 9 ಗಂಟೆಗೆ ಕೃಷ್ಣ ಅವರು ಪೆಟ್ರೋಲ್ ಬಂಕ್ ಬಳಿ ಹಿಂತಿರುಗಿ ಬಂದಾಗ, ಪಾರ್ಕ್ ಮಾಡಿದ್ದ ಜಾಗದಲ್ಲಿ ಬಸ್ ಕಾಣೆಯಾಗಿರುವುದು ಬೆಳಕಿಗೆ ಬಂದಿದೆ. ಇಬ್ಬರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಪಾರ್ಕ್ ಮಾಡಿದ್ದ ಬಸ್ಸನ್ನು ಕದ್ದೊಯ್ದಿದ್ದಾರೆ ಎಂದು ನೀಡಿದ ದೂರಿನನ್ವಯ ಉಡುಪಿ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.ಈ ನಡುವೆ ಕಳುವಾಗಿದ್ದ ಬಸ್ ಶಿರ್ವಾ ಸಮೀಪದ ಮುದರಂಗಡಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಬಸ್ಸನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

Exit mobile version