Site icon Ullalavani

ಮಂಗಳೂರು: 1.6 ಲಕ್ಷ ರೂ. ಮೌಲ್ಯದ 16 ಗ್ರಾಂ ಎಂಡಿಎಂಎ ವಶ; ಓರ್ವನ ಬಂಧನ

ಮಂಗಳೂರು, ಸೆ.30 : ನಿಷೇಧಿತ ಮಾದಕ ವಸ್ತು ಎಂಡಿಎಂಎ ಹೊಂದಿದ್ದ ಆರೋಪಿಯೋರ್ವನನ್ನು ಕಾವೂರು ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದು, ಆತನ ಬಳಿಯಿದ್ದ 1,60,000 ಲಕ್ಷ ರೂ. ಮೌಲ್ಯದ 16 ಗ್ರಾಂ ಎಂಡಿಎಂಎ ಅನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳೂರು ಉಳ್ಳಾಲದ ಕೆ.ಸಿ. ರೋಡ್ ನ ಕೊಟೇಕಾರ್ ಅಂಚೆ ಅಜ್ಜಿನಡ್ಕ ಗ್ರಾಮದ ನಿವಾಸಿ ಮೊಹಮ್ಮದ್ ಇರ್ಫಾನ್ ಎ.ಕೆ, (26) ಬಂಧಿತ ಆರೋಪಿ.ಸೆ. 29ರಂದು ಕಾವೂರು ಪೊಲೀಸ್ ಠಾಣೆಯ ಪೊಲೀಸರು ಮರಕಡ ಗ್ರಾಮದ ಬೊಂದೇಲ್‌ನಿಂದ ಮೂಡುಶೆಡ್ಡೆ ಕಡೆಗೆ ಹೋಗುವ ಡಾಮಾರು ರಸ್ತೆಯ ಬಳಿ ಆರೋಪಿಯು ಅನುಮಾನಾಸ್ಪದವಾಗಿ ನಿಂತಿದ್ದ. ಈ ವೇಳೆ ತನಿಖೆ ನಡೆಸಿದ ಕಾವೂರು ಠಾಣಾ ಪೊಲೀಸರು ಆತನ ಬಳಿಯಿದ್ದ ಸುಮಾರು 16 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತುವನ್ನು ಕಾನೂನು ಬದ್ಧವಾಗಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಎಂಡಿಎಂಎ ಮಾದಕ ವಸ್ತುವಿನ ಅಂದಾಜು ಮೌಲ್ಯವು ಸುಮಾರು 1,60,000 ರೂ. ಆಗಿರುತ್ತದೆ.ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.128/2026 ಎನ್.ಡಿ.ಪಿ.ಎಸ್. ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಪ್ರಕರಣದ ಮುಂದಿನ ತನಿಖೆ ಕೈಗೊಳ್ಳಲಾಗಿದೆ.ಆರೋಪಿಯ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ, ಪುಂಜಾಲ ಕಟ್ಟೆ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ಹಾಗೂ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಗಾಂಜಾ ಸೇವನೆ ಪ್ರಕರಣ ದಾಖಲಾಗಿರುತ್ತದೆ.

Exit mobile version