ಉಳ್ಳಾಲ : ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲು ಮುತುವರ್ಜಿ ವಹಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರನ್ನು ಗಟ್ಟಿ ಸಮಾಜ ಅಭಿನಂದನಾ ಸಮಿತಿ ವತಿಯಿಂದ ಅ.6ರಂದು ಸನ್ಮಾನಿಸಲಾಗುವುದು ಎಂದು ಗಟ್ಟಿ ಸಮಾಜ ಅಭಿನಂದನ ಸಮಿತಿಯ ಅಧ್ಯಕ್ಷರಾದ ಮಮತ ಡಿ ಎಸ್ ಗಟ್ಟಿ ತಿಳಿಸಿದರು.

ತೊಕ್ಕೊಟ್ಟುವಿನ ಉಳ್ಳಾಲ ಪ್ರೆಸ್ ಕ್ಲಬ್ ನಲ್ಲಿ ಶನಿವಾರದಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಅಂಬಿಕಾ ರಸ್ತೆಯ ಗಟ್ಟಿ ಸಮಾಜ ಭವನದಲ್ಲಿ ಮಧ್ಯಾಹ್ನ 3 ಗಂಟೆಗೆ ಅಭಿನಂದನಾ ಸಮಾರಂಭ ನಡೆಯಲಿದೆ. ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗಟ್ಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಜನಾರ್ದನ ಗಟ್ಟಿ ಕನ್ನಿಮನೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್. ಧರ್ಮ, ಗಟ್ಟಿ ಸಮಾಜದ ನಾಯ್ಗರು ಹರೀಶ್ಚಂದ್ರ ಗಟ್ಟಿ ಬೊಂಬ್ಯಾ ಮನೆ, ಮೇಲ್ಡರಾದ ಯಾದವ ಗಟ್ಟಿ ಪಿಲಾರು,ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ ಕಾಪಿಕಾಡ್,ತುಳು ರಂಗಭೂಮಿ ಕಲಾವಿದ ಡಾ.ದೇವದಾಸ್ ಕಾಪಿಕಾಡ್ (ತೆಲಿಕೆದ ಬೊಳ್ಳಿ),ಅಖಿಲ ಭಾರತ ತುಳು ಒಕ್ಕೂಟದ ಅಧ್ಯಕ್ಷ ಎ.ಸಿ. ಭಂಡಾರಿ, ತುಳು ಪರಿಷತ್ ಅಧ್ಯಕ್ಷ ಶುಬೋಧಯ ಆಳ್ವ ಹಾಗೂ ಜಿಲ್ಲಾ ಧಾರ್ಮಿಕ ಸಮಿತಿ ಸದಸ್ಯ ಸುರೇಶ್ ಭಟ್ನಗರ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಗಟ್ಟಿ ಸಮಾಜದ ನಾಯ್ಗರಾದ ಹರೀಶ್ಚಂದ್ರ ಗಟ್ಟಿ ಬೊಂಬ್ಯಾ ಮನೆ, ಗಟ್ಟಿ ಸಮಾಜ ಸೇವಾ ಸಂಘದ ಅಧ್ಯಕ್ಷ ಜನಾರ್ದನ ಗಟ್ಟಿ ಕನ್ನಿಮನೆ, ಉಪಾಧ್ಯಕ್ಷ ಚಂದ್ರಶೇಖರ ಗಟ್ಟಿ ಗುಂಡ್ಯ, ಪ್ರಧಾನ ಕಾರ್ಯದರ್ಶಿ ರತ್ನಾಕರ ಗಟ್ಟಿ, ಜತೆ ಕಾರ್ಯದರ್ಶಿ ಪದ್ಮನಾಭ ಗಟ್ಟಿ ಬಜಿಲಕೇರಿ,ಅಭಿನಂದನಾ ಸಮಿತಿಯ ಸಂಚಾಲಕರಾದ ಉಮೇಶ್ ಗಟ್ಟಿ ಜೆಪ್ಪು ಮೆಸ್ಕಾಂ, ಸುಕುಮಾರ್ ಗಟ್ಟಿ, ಲಿಂಗಪ್ಪ ಗಟ್ಟಿ ಉಪಸ್ಥಿತರಿದ್ದರು.



