Site icon Ullalavani

ಅವಕಾಶವನ್ನು ಉತ್ತಮ ರೀತಿಯಲ್ಲಿ ಸದುಪಯೋಗ ಕೊಂಡಾಗ ಸಾಧನೆ ಸಾಧ್ಯ – ಮಮತ ಡಿ ಎಸ್ ಗಟ್ಟಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಂಗಳೂರು, ಉಪ ನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಹಾಗೂ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ಮಂಗಳ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟ ನಡೆಯಿತು.

ಪಂದ್ಯಾಟಕ್ಕೆ ಕರ್ನಾಟಕ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿ ಎಸ್ ಗಟ್ಟಿ ಅವರು ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಇವರು ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮವಾಗಿ ತನ್ನನ್ನು ತಾನು ತೊಡಗಿಸಿ ಕೊಳ್ಳಬೇಕು ಇದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಮಾತ್ರವಲ್ಲದೇ ಇವಾಗ ಎಲ್ಲಾ ಕ್ಷೇತ್ರಗಳಲ್ಲೂ ವಿಪುಲವಾದ ಅವಕಾಶಗಳು ಇದೆ ಅದನ್ನು ಸರಿಯಾಗಿ ಸದುಪಯೋಗ ಪಡೆಸಿಕೊಂಡಾಗ ಜೀವನದಲ್ಲಿ ಸಾಧನೆ ಸಾಧ್ಯ ಎಂದ್ರು.

ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೆ ಎನ್ ಆಳ್ವ ಅವರು, ಕುಸ್ತಿ ಆಟವು ಮಕ್ಕಳಲ್ಲಿ ಧೈರ್ಯ, ತಾಳ್ಮೆ, ಕಷ್ಟ ಸಹಿಷ್ಣತೆ, ಏಕಾಗ್ರತೆ ಮುಂತಾದ ಗುಣಗಳನ್ನು ಬೆಳೆಸುತ್ತದೆ ಎಂದಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಶಶಿಧರ್ ಜಿಎಸ್, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು ವಿಷ್ಣು ನಾರಾಯಣ್ ಹೆಬ್ಬಾರ್, ಪರಿಸರವಾದಿ ಕೃಷ್ಣಪ್ಪ , ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ಹರೀಶ್ ರೈ , ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶೇಖರ್ ಕಡ್ತಲ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಮೋಹನ್ ಶಿರ್ಲಾಲ್, ಅನುದಾನಿತ ಶಾಲಾ ಕಾಲೇಜು ನೌಕರರ ಸಂಘದ ಅಧ್ಯಕ್ಷ ಕೆ ಎಂ ಕೆ ಮಂಜನಾಡಿ, ಜಿಲ್ಲಾ ವಿಷಯ ಪರಿವೀಕ್ಷಕರು ಲಕ್ಷ್ಮಿ ನಾರಾಯಣ್, ಚಿತ್ರಕಲಾ ಶಿಕ್ಷಕರ ಸಂಘದ ಜಿಲ್ಲಾ ಕಾರ್ಯದರ್ಶಿ ರಫೀಕ್ ತುಂಬೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಜಯಶ್ರೀ, ಮಂಗಳೂರು ದಕ್ಷಿಣ ವಲಯ ಸಿ ಆರ್ ಪಿ ವಿಲ್ಮಾ ಡಿಸೋಜಾ, ಜಿಲ್ಲಾ ಬ್ಯಾಡ್ಮಿಂಟನ್ ಅಶೋಸಿಯೇಷನ್ ಉಪಾಧ್ಯಕ್ಷರು ಸೂರಜ್ ಆಳ್ವ, ಉದ್ಯಮಿ ಸುಪ್ರೀತ್ ಆಳ್ವ, ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢ ಶಾಲೆ ಮುಖ್ಯಶಿಕ್ಷಕಿ ಮೋಹಿನಿ, ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಪ್ರೇಮಲತಾ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನರಸಿಂಹ ನಾಯಕ್, ಸಮಾಜ ಸೇವಕರು ಚಿತ್ತರಂಜನ್ ಮಾಡ, ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶಶಿಧರ್ ಜಿ ಎಸ್, ರಾಷ್ಟ್ರೀಯ ಕಬ್ಬಡಿ ತೀರ್ಪುಗಾರರು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ರಾಧಾಕೃಷ್ಣ ರೈ, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು ವಿಷ್ಣು ನಾರಾಯಣ್ ಹೆಬ್ಬಾರ್, ನಿವೃತ್ತ ಶಿಕ್ಷಕಿ ಕುಮುದದೇವಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಮೋಹನ್ ಶಿರ್ಲಾಲ್ ಮುಂತಾದವರನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಕುಸ್ತಿ ಪಟುಗಳು ಮತ್ತು ತೀರ್ಪುಗಾರರಾದ ಮೋಹನ್ ಬೆಂಗ್ರೆ , ವಿನೋದ್ ಕುಮಾರ್ ಚಿತ್ರಾಪುರ, ಸತೀಶ್ ಬೆಂಗ್ರೆ, ರಕ್ಷಿತ್ , ಚಂದ್ರಿಕಾ ಸೇರಿದಂತೆ ಹಲವರು ಸನ್ಮಾನಿಸಲಾಯಿತು. ಪಂದ್ಯಾಟದ ಸಂಯೋಜಕರು ತ್ಯಾಗಮ್ ಹರೇಕಳ ಸರ್ವರನ್ನು ಸ್ವಾಗತಿಸಿದರು, ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು ವಿಷ್ಣು ನಾರಾಯಣ ಹೆಬ್ಬಾರ್ ಪ್ರಸ್ತಾವನೆ ಗೈದರು. ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ ಧನ್ಯವಾದ ವಿತ್ತರು. ಶಾಲಾ ಶಿಕ್ಷಕರಾದ ಕೃಷ್ಣಶಾಸ್ತ್ರೀ, ಶಿವಣ್ಣ, ನಾಗೇಂದ್ರ , ಉಷಾ, ಅನಿತಾ, ಸ್ಮಿತಾ, ಯಶಸ್ವಿನಿ, ಭವ್ಯ, ಪ್ರಷ್ಮಾ, ರೇಖಾ, ಸುಜಾತ, ದಿವ್ಯ ಶ್ರೀ, ಮೋಹನ್ ಮುಂತಾದವರು ಸಹಕರಿಸಿದ್ದಾರೆ.

Exit mobile version