Site icon Ullalavani

ಜಂತರ್ ಮಂತರ್‌ಗೆ ಅಕ್ರಮ ಪ್ರವೇಶ, ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಸಿಜೆಪಿ ನಾಯಕರಿಗೆ ನ್ಯಾಯಾಂಗ ಬಂಧನ ಸಾಧ್ಯತೆ

ನವದೆಹಲಿ, ಅ.14 : ಜಂತರ್ ಮಂತರ್‌ನಲ್ಲಿ ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಹಾಗೂ ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇರೆಗೆ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ)ಯ ಮುಖಂಡರಾದ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸುವ ಸಾಧ್ಯತೆಯಿದೆ.

ಮಂಗಳವಾರ ಮುಂಜಾನೆ ನಿಷೇಧಾಜ್ಞೆ ನಡುವೆಯೂ ಜಂತರ್ ಮಂತರ್ ಗೆ ನುಗ್ಗಿ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆ ದೆಹಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು.

ಬಂಧಿತ ನಾಯಕರನ್ನು ಬುಧವಾರ ವಿಶೇಷ ಕಾರ್ಯಕಾರಿ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ನ್ಯಾಯಾಲಯಕ್ಕೆ ಹಾಜರುಪಡಿಸಿ ತಿಹಾರ್ ಜೈಲಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.”ಜಂತರ್ ಮಂತರ್ ಪ್ರಕರಣದಲ್ಲಿ ಸೌರವ್ ದಾಸ್, ಅಶುತೋಷ್ ರಾಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ. ಅಕ್ರಮ ಪ್ರವೇಶ, ಬಾಂಡ್ ಉಲ್ಲಂಘನೆ ಮತ್ತು ಕರ್ತವ್ಯಕ್ಕೆ ಅಡ್ಡಿ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ” ಎಂದು ಸಿಜೆಪಿ ಕಾನೂನು ತಂಡದ ಮುಖ್ಯಸ್ಥೆ ರತ್ನಾ ಸಿಂಗ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.”ತಡರಾತ್ರಿಯವರೆಗೂ ನಾಯಕರಿಗೆ ತಮ್ಮ ವಕೀಲರನ್ನು ಭೇಟಿ ಮಾಡಲು ಅವಕಾಶ ನೀಡಿರಲಿಲ್ಲ. ಮುಂಜಾನೆ ೩:೦೦ ಗಂಟೆಗೆ ಖಾಸಗಿ ವ್ಯಾನ್‌ನಲ್ಲಿ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಕರೆತರಲಾಯಿತು. ಈ ಎಲ್ಲಾ ಕಾನೂನುಬಾಹಿರ ಕ್ರಮಗಳ ನಡುವೆಯೂ ಅವರ ನೈತಿಕ ಸ್ಥೈರ್ಯ ಕುಗ್ಗಿಲ್ಲ” ಎಂದು ಅವರು ತಿಳಿಸಿದ್ದಾರೆ.

Exit mobile version