Site icon Ullalavani

ಉಳ್ಳಾಲ ತಾಲೂಕಿನಲ್ಲಿ ಪ್ರಜಾಸೇವೆ ಆಂದೋಲನ ಸಭೆ: ಪೂರ್ವಭಾವಿ ಸಭೆ ಸಂಪನ್ನ


ತೊಕ್ಕೊಟ್ಟು: ರಾಜ್ಯಾದ್ಯಂತ ಪ್ರತಿ ತಿಂಗಳ ಮೂರನೇ ಶನಿವಾರ ಪ್ರಜಾಸೇವೆ ಆಂದೋಲನ ಸಭೆ ನಡೆಸುವ ಸರಕಾರದ ಆದೇಶದಂತೆ, ಅಕ್ಟೋಬರ್ 17ರಂದು ಉಳ್ಳಾಲ ತಾಲೂಕಿನಲ್ಲಿ ನಡೆಯಲಿರುವ ಪ್ರಜಾಸೇವೆ ಆಂದೋಲನ ಸಭೆಯ ಪೂರ್ವಭಾವಿ ಸಭೆ ತೊಕ್ಕೊಟ್ಟಿನ ಉಳ್ಳಾಲ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಅವರ ಅಧ್ಯಕ್ಷತೆಯಲ್ಲಿ ಅಕ್ಟೋಬರ್ 13ರಂದು ಪೂರ್ವಭಾವಿ ಸಭೆ ಕರೆಯಲಾಗಿತ್ತು. ಕಾರ್ಯಕ್ರಮದ ಸಿದ್ಧತೆಗಳು ಹಾಗೂ ವಿವಿಧ ಇಲಾಖೆಗಳ ಸಮನ್ವಯದ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.


ಸಭೆಯಲ್ಲಿ ತಹಶೀಲ್ದಾರ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ, ಉಳ್ಳಾಲ ತಾಲೂಕು ಪಂಚಾಯತ್ ಆಡಳಿತಾಧಿಕಾರಿ ಸೇರಿದಂತೆ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಅಕ್ಟೋಬರ್ 17ರಂದು ನಡೆಯಲಿರುವ ಪ್ರಜಾಸೇವೆ ಆಂದೋಲನ ಸಭೆಯ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಸರಕಾರಿ ಸೇವೆಗಳನ್ನು ಜನರಿಗೆ ತಲುಪಿಸುವ ಉದ್ದೇಶ ಹೊಂದಲಾಗಿದೆ.

Exit mobile version