ಉಳ್ಳಾಲ ತಾಲೂಕು, ಹರೇಕಳ ಗ್ರಾಮ, ಪೊಡಾರು ಮನೆಯ ಜಯರಾಮ ಆಳ್ವ ಪೋಡಾರು (74) ಅ. 16ರಂದು ಅನಾರೋಗ್ಯದಿಂದ ನಿಧನ ಹೊಂದಿರುತ್ತಾರೆ.
ಅವರು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳು ಮತ್ತು ಒಬ್ಬರು ಗಂಡು ಮಗ, ಸೊಸೆ, ಅಳಿಯ, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.ಅವರು ಕಳೆದ 30 ವರ್ಷಗಳಿಂದ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಸಂಚಾಲಕರಾಗಿ ಶಾಲೆಯನ್ನು ಮುನ್ನಡೆಸಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಒತ್ತನ್ನು ನೀಡಿ ರಾಜ್ಯ ಮಟ್ಟದಲ್ಲಿ ಗುರುತಿಸಿ ಕೊಳ್ಳುವಲ್ಲಿ ಮಾರ್ಗದರ್ಶನ ನೀಡಿದವರು.ಪಾವೂರು ಹರೇಕಳ ತ್ರಿ ಶಕ್ತಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾಗಿ, ಕೋಶಾಧಿಕಾರಿಯಾಗಿ, ಹರೇಕಳ ಗಣೇಶೋತ್ಸವ ಸಮಿತಿಯ ಮಾಜಿ ಅಧ್ಯಕ್ಷರಾಗಿ , ಸ್ಪರ್ಶ ಕಲಾವಿದರು ಸಂಘಟನೆಯ ಸ್ಥಾಪಕ ಅಧ್ಯಕ್ಷರಾಗಿ ಹಲವಾರು ನಾಟಕಗಳನ್ನು ನಿರ್ದೇಶನ ಮಾಡಿ, ತರಬೇತಿ ನೀಡಿದವರು.ಹೀಗೆ ಹತ್ತು ಹಲವು ಸಮಾಜಮುಖಿ ಸಂಘಟನೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡವರು.