Site icon Ullalavani

ಬಿಜೆಪಿ ಹಿರಿಯ ಮುಖಂಡ ಎಲ್‌ಕೆ ಅಡ್ವಾಣಿ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ನವದೆಹಲಿ, ಅ.17 : ಬಿಜೆಪಿ ಹಿರಿಯ ಮುಖಂಡ, ಭಾರತದ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ(98) ಅವರು ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಅವರನ್ನು ಶುಕ್ರವಾರ ತಡರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎದೆ ಸೋಂಕು ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಎಲ್‌ಕೆ ಅಡ್ವಾಣಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ವಾಸಕೋಶ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಈ ವರ್ಷದ ಮೇ ತಿಂಗಳಲ್ಲಿಯೂ ವಯೋಸಹಜ ಆರೋಗ್ಯ ಸಮಸ್ಯೆಗಳ ಹಿನ್ನೆಲೆಯಲ್ಲಿ ಅಡ್ವಾಣಿ ಅವರು ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಕೆಲವು ದಿನಗಳ ಚಿಕಿತ್ಸೆಯ ಬಳಿಕ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಇದೀಗ ಉಸಿರಾಟ ಸಮಸ್ಯೆ, ಎದೆ ಸೋಂಕಿನಿಂದಾಗಿ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Exit mobile version