ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಜಂಕ್ಷನ್‍ನಲ್ಲಿ ಭಾನುವಾರ ತಡರಾತ್ರಿ ನಡೆದ ವಿಕ್ಕಿ ಬೋಳಾರ್ ಕೊಲೆ ಪ್ರಕರಣಕ್ಕೆ ಸಂಬಂ„ಸಿದಂತೆ ಪ್ರಮುಖ ಅರೋಪಿ ಸೈಕೋ ವಿಕ್ಕಿ ಯಾನೆ ರವಿಚಂದ್ರ ಪೂಜಾರಿ ಸೇರಿದಂತೆ ಐವರನ್ನು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಸಾಂದರ್ಭಿಕ ಚಿತ್ರ
ಕೋಡಿಕಲ್ ನಿವಾಸಿ ವಿಕ್ರಮ್ ಯಾನೆ ವಿಕ್ಕಿ ಬೋಳಾರ್‍ನನ್ನು ಸೈಕೋ ವಿಕ್ಕಿ ನೇತೃತ್ವದ ತಂಡ ತಲವಾರಿನಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿತ್ತು. ಕೃತ್ಯಕ್ಕೆ ಬಳಸಿದ್ದ ಸ್ಕಾರ್ಪಿಯೋ ಕಾರನ್ನು ಎಲಿಯಾರ್ ಬಳಿ ತೊರೆದು ಹೋಗಿದ್ದರು. ಆರೋಪಿಗಳ ಪತ್ತೆಗಾಗಿ ಉಳ್ಳಾಲ ಪೊಲೀಸರು ಸೇರಿದಂತೆ ಸಿಸಿಬಿ ಪೊಲೀಸರುಬಲೆ ಬೀಸಿದ್ದ ಖಚಿತ ಮಾಹಿತಿ ಮೇರೆಗೆ ಕೃತ್ಯದಲ್ಲಿ ಭಾಗಿಯಾಗಿದ್ದ ಐವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಯುತ್ತಿದೆ.



