ಕೋಟೆಕಾರ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11ನೇ ವಾರ್ಡ್‌ನ ಶಾಸ್ತಾನಗರ, ಮಾತೃಶ್ರೀ ಬಡಾವಣೆಯ 2 ಮತ್ತು 3ನೇ ಅಡ್ಡರಸ್ತೆಗಳ ಕಾಂಕ್ರೀಟ್ ಕಾಮಗಾರಿಗೆ ಭಾನುವಾರ ಶಂಕುಸ್ಥಾಪನೆ ನೆರವೇರಿಸಲಾಯಿತು.
ಕೋಟೆಕಾರ್ ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ರಾವ್ ಅವರು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಪಟ್ಟಣ ಪಂಚಾಯಿತಿಗೆ ಚುನಾವಣೆ ನಡೆದ ದಿನದಿಂದಲೇ ವಾರ್ಡ್‌ನ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಶಾಸ್ತಾನಗರದ ಎಲ್ಲಾ ಒಳರಸ್ತೆಗಳ ಕಾಂಕ್ರೀಟ್ ಕಾಮಗಾರಿ ಪೂರ್ಣಗೊಂಡಿದ್ದು, ವಾರ್ಡ್‌ನಲ್ಲಿ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.
ಕಳೆದ ಎರಡು ವರ್ಷಗಳಲ್ಲಿ ಶಾಸಕರ ಹಾಗೂ ಪಟ್ಟಣ ಪಂಚಾಯಿತಿಯ ಅನುದಾನದ ಮೂಲಕ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಪಂಚಾಯಿತಿ ಸದಸ್ಯನಾಗಿ ಅಧಿಕಾರ ಸ್ವೀಕರಿಸಿ ಎರಡು ವರ್ಷಗಳಾಗಿದ್ದು, ನಿರೀಕ್ಷೆಗೂ ಮೀರಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗಿದೆ. ರಸ್ತೆ ಕಾಂಕ್ರೀಟೀಕರಣ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಪ್ರಥಮ ಆದ್ಯತೆ ನೀಡಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಮೋಹನ್ ದಾಸ್ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಪುಷ್ಪರಾಜ್, ಹರೀಶ್ ಶೆಟ್ಟಿಗಾರ್, ಲೋಲಾಕ್ಷಿ, ಶಾಮಲಾ, ಯಶೋಧ, ನಾಗೇಶ್, ಧನುಶ್, ಸುಮಿತ್, ಚರಣ್, ಭಾಸ್ಕರ ಮಡ್ಯಾರ್, ಲೀನಾ ಡಿಸೋಜ, ಜೆಸ್ಟನ್ ಡಿಸೋಜ, ಮೆಲ್ಸನ್ ಡಿಸೋಜ, ಅನೂಪ್, ಸೌಮ್ಯ, ಗಾಯತ್ರಿ, ವಿಜಯ ಮೋಹನ್ ದಾಸ್ ಹಾಗೂ ಸಂಧ್ಯಾ ಸೇರಿದಂತೆ ಇತರರು ಉಪಸ್ಥಿತರಿದ್ದರು.