ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೈಕಲ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಮೃತರನ್ನು ಕೋಟ ಮಣೂರು ನಿವಾಸಿ, ಹಿರಿಯ RSS ಮುಖಂಡ ಗುರುದಾಸ್ ಶೆಣೈ ಎಂದು ಗುರುತಿಸಲಾಗಿದೆ.
ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್‌ನಲ್ಲಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಬರುತ್ತಿದ್ದ ಕಾರು ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೈಕಲ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಕಾರು ಚಾಲಕ, ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಕೋಟದ ಜೀವನ್ ಮಿತ್ರ ನಾಗರಾಜ್ ಪುತ್ರನ್ ಅವರು ಗಾಯಾಳುವನ್ನು ಆಂಬುಲೆನ್ಸ್‌ನಲ್ಲಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಲು ನೆರವಾದರು.