ಬ್ರಹ್ಮಾವರ: ಉಡುಪಿಯ ಬ್ರಹ್ಮಾವರದಲ್ಲಿ ಕರ್ನಾಟಕ ಬುಡೋಕಾನ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಆಯೋಜಿಸಲಾದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪೂರ್ವಿ ಆರ್. ಗಟ್ಟಿ ಅವರು ಕಟಾ ಹಾಗೂ ಕುಮಿಟೆ ವಿಭಾಗಗಳಲ್ಲಿ ದ್ವಿತೀಯ ಸ್ಥಾನ ಪಡೆದು ಸಾಧನೆ ಮೆರೆದಿದ್ದಾರೆ.
ರವಿಚಂದ್ರ ಗಟ್ಟಿ ಅವರ ಪುತ್ರಿಯಾದ ಪೂರ್ವಿ ಆರ್. ಗಟ್ಟಿ ಅವರು ಕರಾಟೆ ಸ್ಪರ್ಧೆಯ ಎರಡೂ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಇವರ ಸಾಧನೆಗೆ ಕುಟುಂಬಸ್ಥರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ.