ಕೊಣಾಜೆ: ಕೊಣಾಜೆ ಪ್ರೌಢಶಾಲೆಯ ವತಿಯಿಂದ ಆಯೋಜಿಸಲಾಗುತ್ತಿರುವ ತಾಲೂಕು ಮಟ್ಟದ ಶಾಲಾ ಕ್ರೀಡಾಕೂಟದ ಯಶಸ್ವಿ ಆಯೋಜನೆಗೆ ಯೂತ್ ಫ್ರೆಂಡ್ಸ್ ಕ್ಲಬ್ (YFC) (ರಿ.), ಕೊಣಾಜೆ ವತಿಯಿಂದ ಆರ್ಥಿಕ ಸಹಾಯಧನವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಯೂತ್ ಫ್ರೆಂಡ್ಸ್ ಕ್ಲಬ್‌ನ ಪದಾಧಿಕಾರಿಗಳು ಹಾಗೂ ಶಾಲೆಯ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಕ್ರೀಡಾಕೂಟವು ಯಶಸ್ವಿಯಾಗಿ ನಡೆಯಲಿ ಹಾಗೂ ಇದರಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡಲಿ ಎಂದು ಯುವ ಮಿತ್ರ ಬಳಗದ ಸದಸ್ಯರು ಶುಭ ಹಾರೈಸಿದರು