ಉಳ್ಳಾಲ: ಜನತಂತ್ರದ ರಕ್ಷಣೆ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗಾಗಿ ಹಾಗೂ ಎಸ್ಐಆರ್ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಸಂಯುಕ್ತ ನಾಗರಿಕ ವೇದಿಕೆ, ಉಳ್ಳಾಲ ಇದರ ವತಿಯಿಂದ ಅಕ್ಟೋಬರ್ 30ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಅಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಕೆ.ಸಿ. ರಸ್ತೆ ಜಂಕ್ಷನ್ನಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ವೇದಿಕೆಯ ಪ್ರಕಟಣೆ ತಿಳಿಸಿದೆ.
ಜನತಂತ್ರದ ರಕ್ಷಣೆ, ಸಂವಿಧಾನದ ಆಶಯಗಳ ಪಾಲನೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಉಳಿವಿನ ಉದ್ದೇಶದಿಂದ ಪ್ರತಿಭಟನೆ ಆಯೋಜಿಸಲಾಗಿದ್ದು, ಎಸ್ಐಆರ್ ಪ್ರಕ್ರಿಯೆ ವಿರುದ್ಧ ಧ್ವನಿ ಎತ್ತುವ ಜೊತೆಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರ ರಾಜೀನಾಮೆಗೆ ಆಗ್ರಹಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.

