Site icon Ullalavani

ಗರ್ಭಿಣಿ ಪತ್ರಕರ್ತೆಯನ್ನು ತಳ್ಳಿದ ಆರೋಪ: ರಾಹುಲ್ ಗಾಂಧಿಗೆ ‘ಸುಪ್ರೀಂ’ ನೋಟಿಸ್‌

ನವದೆಹಲಿ: ಗರ್ಭಿಣಿ ಪತ್ರಕರ್ತೆಯೊಬ್ಬರನ್ನು ತಳ್ಳಿದ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರರಿಂದ ಪ್ರತಿಕ್ರಿಯೆ ಕೇಳಿ ನೋಟಿಸ್‌ ಜಾರಿಗೊಳಿಸಿದೆ.

ಅಕ್ಟೋಬ‌ರ್ 12ರಂದು ಸುಪ್ರೀಂ ಕೋರ್ಟ್‌ಗೆ ನಡೆದ ರ್ಯಾಲಿ ವೇಳೆ, ರಾಹುಲ್ ಗಾಂಧಿ ಅವರು ಗರ್ಭಿಣಿಯನ್ನು ನೂಕಿದ್ದರು ಎಂಬ ಆರೋಪದ ಕುರಿತು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಿತು.
ಈ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜಾಯ್‌ಲ್ಯ ಬಾಗ್ನಿ ಅವರಿದ್ದ ಪೀಠವು ನಡೆಸಿದ್ದು, ರಾಹುಲ್ ಗಾಂಧಿ ಮತ್ತು ಇತರರಿಗೆ ನೋಟಿಸ್‌ ಜಾರಿ ಮಾಡಿದೆ.
ಈ ವಿಷಯವನ್ನು ಹಿರಿಯ ವಕೀಲ ಗೌರವ್ ಭಾಟಿಯಾ ನ್ಯಾಯಪೀಠದ ಗಮನಕ್ಕೆ ತಂದಿದ್ದಾರೆ. ಸುಪ್ರೀಂ ಕೋರ್ಟ್ ಆವರಣದಲ್ಲಿ ರಾಹುಲ್ ಗಾಂಧಿ ಏಕಾಏಕಿ ಪತ್ರಕರ್ತೆಯನ್ನು ತಳ್ಳಿದ್ದಾರೆ. ಆಕೆ ಮೂರು ತಿಂಗಳ ಗರ್ಭಿಣಿಯಾಗಿದ್ದು, ಎಫ್‌ಐಆ‌ರ್ ದಾಖಲಿಸುವಂತೆ ಕೋರಲಾಗಿದೆ.
ಎಸ್‌ಐಆರ್‌ನಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ವಿರೋಧ ಪಕ್ಷದ ನಾಯಕರೊಂದಿಗೆ ರಾಹುಲ್ ಗಾಂಧಿ ಮೆರವಣಿಗೆ ನಡೆಸಿದ್ದರು. ಅಕ್ಟೋಬರ್ 12ರ ಈ ರ್ಯಾಲಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಈಗಾಗಲೇ ರಾಹುಲ್ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಕಾಂಗ್ರೆಸ್ ಪಕ್ಷ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿತ್ತು.

Exit mobile version