Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
suddi

ಪೋಕ್ಸೊ ಪ್ರಕರಣ: ಮಂಗಳೂರಿನ ಚರ್ಚ್ ಫಾದರ್ ಸಿಪ್ರಿಯನ್ ಪಿಂಟೊಗೆ ಷರತ್ತುಬದ್ಧ ಜಾಮೀನು ಮಂಜೂರು

UllalaVaniBy UllalaVaniOctober 30, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು, ಅ.30 : ನಗರದ ವೆಲೆನ್ಸಿಯಾದ ಸೇಂಟ್ ವಿನ್ಸೆಂಟ್ ಫೆರರ್ ಚರ್ಚ್‌ಗೆ ಬರುತ್ತಿದ್ದ ಅಪ್ರಾಪ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಚರ್ಚ್‌ನ ಮಾಜಿ ಧರ್ಮಗುರು ರೆ. ಫಾ. ಸಿಪ್ರಿಯನ್ ಪಿಂಟೊ (65) ಅವರಿಗೆ ಇಲ್ಲಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 15ರಂದು ದಾಖಲಾಗಿದ್ದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಕ್ಟೋಬರ್ 18ರಂದು ಪೊಲೀಸರ ಮುಂದೆ ಶರಣಾಗಿದ್ದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಜಾಮೀನು ಅರ್ಜಿಯನ್ನು ಪುರಸ್ಕರಿಸಿ ನ್ಯಾಯಾಧೀಶರಾದ ಮಾನು ಕೆ.ಎಸ್. ಅವರು ಈ ಆದೇಶ ಹೊರಡಿಸಿದ್ದಾರೆ .

ಚರ್ಚ್ ಆವರಣದಲ್ಲಿ ಶಿಸ್ತು ಕಾಪಾಡುವ ಉದ್ದೇಶದಿಂದ ಸಂಜೆ 7 ಗಂಟೆಯ ನಂತರ ಗೇಟ್ ಮುಚ್ಚುವುದು ಸೇರಿದಂತೆ ಕೆಲ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದ್ದರಿಂದ ಅಸಮಾಧಾನಗೊಂಡ ಕೆಲವರು ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಅರ್ಜಿದಾರರ ಪರ ವಕೀಲರಾದ ರಾಜೇಶ್ ಕುಮಾರ್ ಅಮ್ಟಾಡಿ ವಾದ ಮಂಡಿಸಿದ್ದರು.ಕೃತ್ಯ ನಡೆದಿದೆ ಎನ್ನಲಾದ ಅವಧಿಗೂ ಮತ್ತು ದೂರು ದಾಖಲಾದ ದಿನಾಂಕಕ್ಕೂ ಎರಡು ತಿಂಗಳಿಗೂ ಹೆಚ್ಚು ಕಾಲಾವಕಾಶವಿದೆ, ಅಲ್ಲದೆ ಇದೇ ವಿಷಯವಾಗಿ ಈ ಹಿಂದೆ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಸೂಚನೆಯಂತೆ ಪೊಲೀಸರು ನಡೆಸಿದ ವಿಚಾರಣೆಯಲ್ಲೂ ಆರೋಪದಲ್ಲಿ ಹುರುಳಿಲ್ಲ ಎಂಬ ವರದಿ ಬಂದಿತ್ತು ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.ಆರೋಪಿಗೆ 65 ವರ್ಷ ವಯಸ್ಸಾಗಿದ್ದು, ವಿವಿಧ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂಬುದನ್ನು ಪರಿಗಣಿಸುವಂತೆ ಕೋರಿದ್ದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಆರೋಪಿಗೆ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಒಬ್ಬರ ಭದ್ರತಾ ಖಾತರಿಯೊಂದಿಗೆ ಜಾಮೀನು ನೀಡಿದೆ. ವಿಚಾರಣೆಯ ದಿನಾಂಕಗಳಂದು ನ್ಯಾಯಾಲಯಕ್ಕೆ ತಪ್ಪದೇ ಹಾಜರಾಗಬೇಕು, ತನಿಖಾಧಿಕಾರಿಗಳು ಕರೆದಾಗ ಹಾಜರಾಗಿ ಸಹಕಾರ ನೀಡಬೇಕು, ಸಂತ್ರಸ್ತ ಅಪ್ರಾಪ್ತನನ್ನು ಭೇಟಿಯಾಗುವುದಾಗಲಿ ಅಥವಾ ಆತನಿಗೆ ಕಿರುಕುಳ ನೀಡುವುದಾಗಲಿ ಮಾಡಬಾರದು, ಸಾಕ್ಷ್ಯಾಧಾರಗಳನ್ನು ನಾಶಪಡಿಸಬಾರದು, ನ್ಯಾಯಾಲಯದ ಅನುಮತಿ ಇಲ್ಲದೆ ದೇಶ ಬಿಟ್ಟು ತೆರಳುವಂತಿಲ್ಲ ಹಾಗೂ ವಾಸಸ್ಥಳದ ವಿಳಾಸ ಮತ್ತು ಮೊಬೈಲ್ ಸಂಖ್ಯೆಗಳನ್ನು ಒದಗಿಸಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ಈ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದಲ್ಲಿ ಜಾಮೀನು ರದ್ದುಪಡಿಸಲು ಪ್ರಾಸಿಕ್ಯೂಷನ್‌ಗೆ ಅವಕಾಶವಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ನಕಲಿ ಇ-ಚಲನ್ ಲಿಂಕ್‌ಗಳ ಮೂಲಕ ಸೈಬರ್ ವಂಚನೆ: ಸಾರ್ವಜನಿಕರಿಗೆ ಮಂಗಳೂರು ಪೊಲೀಸರ ಎಚ್ಚರಿಕೆ

October 30, 2026

ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಳ್ಳಾಲದಲ್ಲಿ ಪತ್ರಿಕಾರಂಗದ ಭೀಷ್ಮ ದಿ. ಮನೋಹರ ಪ್ರಸಾದ್ ಸಂಸ್ಮರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ

October 30, 2026

ದಸರಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಾನ್ವಿಗೆ ಬೆಳ್ಳಿ ಪದಕ

October 30, 2026

Comments are closed.

Advertise
ಸಂಪರ್ಕಿಸಿ

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026
suddi

ನಕಲಿ ಇ-ಚಲನ್ ಲಿಂಕ್‌ಗಳ ಮೂಲಕ ಸೈಬರ್ ವಂಚನೆ: ಸಾರ್ವಜನಿಕರಿಗೆ ಮಂಗಳೂರು ಪೊಲೀಸರ ಎಚ್ಚರಿಕೆ

By UllalaVaniOctober 30, 20260

ಮಂಗಳೂರು: ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ಇ-ಚಲನ್ ದಂಡ ಪಾವತಿಸುವಂತೆ ನಕಲಿ SMS ಹಾಗೂ ವಾಟ್ಸ್‌ಆ್ಯಪ್ ಸಂದೇಶಗಳನ್ನು ಕಳುಹಿಸಿ ಸಾರ್ವಜನಿಕರನ್ನು…

ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಳ್ಳಾಲದಲ್ಲಿ ಪತ್ರಿಕಾರಂಗದ ಭೀಷ್ಮ ದಿ. ಮನೋಹರ ಪ್ರಸಾದ್ ಸಂಸ್ಮರಣೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ

October 30, 2026

ದಸರಾ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಾನ್ವಿಗೆ ಬೆಳ್ಳಿ ಪದಕ

October 30, 2026

ಉಡುಪಿ: ನವೆಂಬರ್ 3ನೇ ವಾರದಲ್ಲಿ ಬೆಂಗಳೂರು-ಕಾರವಾರ ವಂದೇ ಭಾರತ್ ರೈಲು ಸಂಚಾರ

October 30, 2026
1 2 3 … 2,153 Next
Automatic YouTube Gallery

"ಮುಸ್ಲಿಮರು ಧಾರ್ಮಿಕ ಶಿಕ್ಷಣದ ಜೊತೆಗೆ ಲೌಕಿಕ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಿ"; ಎಪಿ ಉಸ್ತಾದ್

ಯೆನೆಪೋಯ ವಿವಿಯಿಂದ ಎಪಿ ಉಸ್ತಾದ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ;ಗೌರವ ಡಾಕ್ಟರೇಟ್ ಪದವಿಯನ್ನು ಅಲ್ಲಾಹನು ನೀಡಿದ ಅನುಗ್ರಹವೆಂದು ಸ್ವೀಕರಿಸಿದ್ದೇನೆ- ಎಪಿ ಉಸ್ತಾದ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
"ಮುಸ್ಲಿಮರು ಧಾರ್ಮಿಕ ಶಿಕ್ಷಣದ ಜೊತೆಗೆ ಲೌಕಿಕ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಿ"; ಎಪಿ ಉಸ್ತಾದ್
Now Playing
"ಮುಸ್ಲಿಮರು ಧಾರ್ಮಿಕ ಶಿಕ್ಷಣದ ಜೊತೆಗೆ ಲೌಕಿಕ ಶಿಕ್ಷಣಕ್ಕೂ ಹೆಚ್ಚಿನ ಆದ್ಯತೆ ನೀಡಿ"; ಎಪಿ ಉಸ್ತಾದ್
ಯೆನೆಪೋಯ ವಿವಿಯಿಂದ ಎಪಿ ಉಸ್ತಾದ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ;ಗೌರವ ...
ಯೆನೆಪೋಯ ವಿವಿಯಿಂದ ಎಪಿ ಉಸ್ತಾದ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ;ಗೌರವ ಡಾಕ್ಟರೇಟ್ ಪದವಿಯನ್ನು ಅಲ್ಲಾಹನು ನೀಡಿದ ಅನುಗ್ರಹವೆಂದು ಸ್ವೀಕರಿಸಿದ್ದೇನೆ- ಎಪಿ ಉಸ್ತಾದ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
40 ವರ್ಷದ ವಿವಾಹಿತ ಧರ್ಮಗುರು& 22ವರ್ಷದ ಯುವತಿ ಪ್ರಕರಣ: ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ!
Now Playing
40 ವರ್ಷದ ವಿವಾಹಿತ ಧರ್ಮಗುರು& 22ವರ್ಷದ ಯುವತಿ ಪ್ರಕರಣ: ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ!
ಮಂಗಳೂರಿನಲ್ಲಿ ವಿವಾಹಿತ ಧರ್ಮಗುರುವಿನ ಲವ್ ಸ್ಟೋರಿ ;ಮದರಸಾದಲ್ಲಿ ಪರಿಚಯ, ಮೂರು ...
ಮಂಗಳೂರಿನಲ್ಲಿ ವಿವಾಹಿತ ಧರ್ಮಗುರುವಿನ ಲವ್ ಸ್ಟೋರಿ ;ಮದರಸಾದಲ್ಲಿ ಪರಿಚಯ, ಮೂರು ವರ್ಷಗಳ ಪ್ರೀತಿ

ಪೋಷಕರ ಜೊತೆ ಹೋಗಲು ನಿರಾಕರಿಸಿದ ಮಗಳು; ಕುಟುಂಬಸ್ಥರ ಕಣ್ಣೀರು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ...
ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version