Site icon Ullalavani

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಮಾಮಹೇಶ್ವರಿ ಕಬಡ್ಡಿ ಅಕಾಡಮಿ ಅಧ್ಯಕ್ಷ ಎ.ಜೆ. ಶೇಖರ್ ಅವರಿಗೆ ಅಭಿನಂದನೆ

ತೊಕ್ಕೊಟ್ಟು: ಹಲವಾರು ಉದಯೋನ್ಮುಖ ಕಬಡ್ಡಿ ಆಟಗಾರರಿಗೆ ಬೆನ್ನೆಲುಬಾಗಿ ನಿಂತು, ಅವರ ಕ್ರೀಡಾ ಬದುಕಿಗೆ ಆಸರೆಯಾಗಿರುವ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡಮಿಗೆ 2026ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುವ ಹಿನ್ನೆಲೆಯಲ್ಲಿ, ಅಕಾಡಮಿಯ ಅಧ್ಯಕ್ಷರು ಹಾಗೂ ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಧಾರ್ಮಿಕ ಮತ್ತು ಸಾಮಾಜಿಕ ಮುಂದಾಳು, ಕೊಡುಗೈದಾನಿ ಎ.ಜೆ. ಶೇಖರ್ ಅವರನ್ನು ತೊಕ್ಕೊಟ್ಟಿನ ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ವತಿಯಿಂದ ಅಭಿನಂದಿಸಲಾಯಿತು.

ಪ್ರತಿಷ್ಠಾನದ ಅಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟ್ಟು ಅವರು ಎ.ಜೆ. ಶೇಖರ್ ಅವರ ಸ್ವಗೃಹಕ್ಕೆ ಭೇಟಿ ನೀಡಿ ಗೌರವಪೂರ್ವಕವಾಗಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್, ಕೋಶಾಧಿಕಾರಿ ಪ್ರಸಾದ್ ಕೊಂಡಾಣ, ಗುರುವಂದನೆ ಸಂಚಾಲಕ ಮೋಹನ್ ಸಾಲ್ಯಾನ್ ಹಾಗೂ ಕಾರ್ಯದರ್ಶಿ ದೀಕ್ಷಿತ್ ನಿಸರ್ಗ ಉಪಸ್ಥಿತರಿದ್ದರು.

Exit mobile version