ಉಳ್ಳಾಲ್ ನ್ಯೂಸ್ ನೆಟ್ ವರ್ಕ್
ಬೆಂಗಳೂರು: ಚಾಕು ಹಿಡಿದುಕೊಂಡು ಮುಖ್ಯಮಂತ್ರಿ ಮನೆಗೆ ಬಂದಿದ್ದ ವ್ಯಕ್ತಿಯೋರ್ವನನ್ನು ಸಿಎಂ ನಿವಾಸದ ಭದ್ರತಾ ಸಿಬ್ಬಂದಿಗಳು ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.
ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯೊಬ್ಬ, ಸಿಎಂ ನಿವಾಸ ಪ್ರವೇಶಿಸಲು ಯತ್ನಿಸುತ್ತಿದ್ದು, ಈ ಸಂದರ್ಭದಲ್ಲಿ ಆತನು ತನ್ನ ಜೇಬಿನಲ್ಲಿ ಚೂರಿಯನ್ನು ಇರಿಸಿಕೊಂಡಿದ್ದನ್ನು ಗಮನಿಸಿದ ಸಿಬ್ಬಂದಿಗಳು ಕೂಡಲೇ ಆತನನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿ ಹೈಗ್ರೌಂಡ್ ಪೊಲೀಸರ ವಶದಲ್ಲಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಈತನು ಯಾವ ಉದ್ದೇಶದಿಂದ ಚೂರಿಯನ್ನು ತನ್ನ ಜೇಬಿನಲ್ಲಿ ಇಟ್ಟುಕೊಂಡು ಮುಖ್ಯಮಂತ್ರಿ ಮನೆಯನ್ನು ಪ್ರವೇಶಿಸಲು ಯತ್ನಿಸಿದ್ದ ಎಂಬ ಬಗ್ಗೆ ವಿಚಾರಣೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ.


