Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ದೇರಳಕಟ್ಟೆ

ಕಣಚೂರು ಪಬ್ಲಿಕ್ ಸ್ಕೂಲ್‌ನಲ್ಲಿ ‘ಗೋಲ್ ರಶ್–2K26’ ಹ್ಯಾಂಡ್‌ಬಾಲ್ ಪಂದ್ಯಾವಳಿ ಯಶಸ್ವಿ

UllalaVaniBy UllalaVaniNovember 5, 2026No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ದೇರಳಕಟ್ಟೆ, ನ. 5: ಕಣಚೂರು ಪಬ್ಲಿಕ್ ಸ್ಕೂಲ್, ದೇರಳಕಟ್ಟೆ ಇದರ ಆಶ್ರಯದಲ್ಲಿ ಎಐಸಿಎಸ್ ಅಂತರ ಶಾಲಾ ಹ್ಯಾಂಡ್‌ಬಾಲ್ ಪಂದ್ಯಾವಳಿ ‘ಗೋಲ್ ರಶ್–2K26’ ನವೆಂಬರ್ 5ರಂದು ಶಾಲಾ ಮೈದಾನದಲ್ಲಿ ನಡೆಯಿತು. ಹಿರಿಯ ಹಾಗೂ ಕಿರಿಯ ವಿಭಾಗಗಳ ಬಾಲಕ ಮತ್ತು ಬಾಲಕಿಯರ ತಂಡಗಳು ಪಂದ್ಯಾವಳಿಯಲ್ಲಿ ಉತ್ಸಾಹದಿಂದ ಪಾಲ್ಗೊಂಡವು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯ ಅತಿಥಿ, ಏಕಲವ್ಯ ಪ್ರಶಸ್ತಿ ಪುರಸ್ಕೃತ ಹಾಗೂ ಏಷ್ಯನ್ ಚಾಂಪಿಯನ್‌ಶಿಪ್ ಚಿನ್ನದ ಪದಕ ವಿಜೇತ, ಭಾರತ ಸರ್ಕಾರದ ಅಂಚೆ ಇಲಾಖೆಯ ಅಂಚೆ ಸಹಾಯಕ ನಿತಿನ್ ಪೂಜಾರಿ ಅವರು, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಸೋಲಿನಿಂದ ಎದೆಗುಂದದೆ ನಿರಂತರ ಪ್ರಯತ್ನ ಮಾಡಬೇಕು. ಸೋಲಿಗೆ ಕಾರಣಗಳನ್ನು ವಿಶ್ಲೇಷಿಸಿ ತಪ್ಪುಗಳನ್ನು ತಿದ್ದಿಕೊಂಡು ಮುಂದಿನ ಸ್ಪರ್ಧೆಗೆ ಹೆಚ್ಚಿನ ಸಿದ್ಧತೆಯೊಂದಿಗೆ ಮರಳಬೇಕು. ಗೆಲುವು ಮತ್ತು ಸೋಲು ಎರಡನ್ನೂ ಸಮಾನ ಮನೋಭಾವದಿಂದ ಸ್ವೀಕರಿಸುವ ಗುಣವನ್ನು ಕ್ರೀಡಾಪಟುಗಳು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಣಚೂರು ಪಬ್ಲಿಕ್ ಸ್ಕೂಲ್‌ನ ಸಂಚಾಲಕ ಅಬ್ದುಲ್ ರಹಿಮಾನ್ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ, ಶಿಸ್ತು, ಛಲ ಹಾಗೂ ಕ್ರೀಡಾ ಮನೋಭಾವವನ್ನು ಬೆಳೆಸುತ್ತದೆ. ಸೋಲನ್ನು ಕಲಿಕೆಯ ಅವಕಾಶವಾಗಿ ಸ್ವೀಕರಿಸಿ ನಿರಂತರ ಪ್ರಯತ್ನದ ಮೂಲಕ ಯಶಸ್ಸಿನತ್ತ ಸಾಗಬೇಕು ಎಂದು ಪ್ರೋತ್ಸಾಹಿಸಿದರು.

ಕಾರ್ಯಕ್ರಮದಲ್ಲಿ ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ ಡೀನ್ ಡಾ. ಶಹನವಾಜ್ ಮಣಿಪಾಡಿ, ಕಣಚೂರು ಹಾಸ್ಪಿಟಲ್ ಆಂಡ್ ರಿಸರ್ಚ್ ಸೆಂಟರ್‌ನ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ರೋಹನ್ ಮೊನಿಸ್, ಕಣಚೂರು ಕಾಲೇಜ್ ಆಫ್ ಫಾರ್ಮಸಿಯ ಪ್ರಾಂಶುಪಾಲ ಡಾ. ರಾಜೀವ್ ಕುಮಾರ್, ಕಣಚೂರು ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಂಡ್ ಸೈನ್ಸಸ್‌ನ ಪ್ರಾಂಶುಪಾಲ ಪ್ರೊ. ಇಕ್ಬಾಲ್ ಅಹಮದ್ ಯು.ಟಿ., ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಾಹಿದಾ ಬಿ.ಎಂ., ಕಣಚೂರು ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲೆ ಕ್ಯಾರೆನ್ ಟ್ರೆಸ್ಸಿಲ್ಲಾ ಡಿಸೋಜ ಹಾಗೂ ಪೂರ್ವ ಪ್ರಾಥಮಿಕ ವಿಭಾಗದ ಪ್ರಾಂಶುಪಾಲೆ ಲಿನೆಟ್ ಡಿಸೋಜ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭವನ್ನು ಕಣಚೂರು ಅಕಾಡೆಮಿ ಆಫ್ ಜನರಲ್ ಎಜುಕೇಶನ್‌ನ ಟ್ರಸ್ಟಿ ಉಮಯ್ಯ ಬಾನು ನೆರವೇರಿಸಿದರು. ಈ ಸಂದರ್ಭದಲ್ಲಿ ಪಂದ್ಯಾವಳಿಯಲ್ಲಿ ಭಾಗವಹಿಸಿದ ವಿವಿಧ ಶಾಲೆಗಳ ತಂಡಗಳ ಸಾಧನೆಯನ್ನು ಗುರುತಿಸಿ, ವಿಜೇತ ತಂಡಗಳಿಗೆ ಹಾಗೂ ಅತ್ಯುತ್ತಮ ವೈಯಕ್ತಿಕ ಪ್ರದರ್ಶನ ನೀಡಿದ ಆಟಗಾರರಿಗೆ ಬಹುಮಾನ ಮತ್ತು ಪ್ರಶಸ್ತಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮವನ್ನು ಸೌಮ್ಯ ಸುವರ್ಣ ಮತ್ತು ಲವೀನಾ ಜೊವಿಟಾ ಕ್ರಾಸ್ತಾ ನಿರೂಪಿಸಿದರು. ಸರಿತಾ ಡಿಸೋಜ ಬಹುಮಾನ ವಿತರಣೆಯ ಘೋಷಣೆ ನೆರವೇರಿಸಿದರು. ಐವಿ ಡಿಸೋಜ ಹಾಗೂ ಜುವೈರಾ ಮುನವ್ವರಾ ವಂದನಾರ್ಪಣೆ ಸಲ್ಲಿಸಿದರು. ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡ ಈ ಪಂದ್ಯಾವಳಿಯು ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ತಂಡದ ಒಗ್ಗಟ್ಟು, ಶಿಸ್ತು ಹಾಗೂ ಪರಸ್ಪರ ಸಹಕಾರದ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ದೇರಳಕಟ್ಟೆ: ಬ್ಯಾರಿ ಭಾಷಾ ದಿನಾಚರಣೆ- ಪ್ರತ್ಯೇಕ ಧ್ವಜ ನಿರ್ಮಾಣಕ್ಕೆ ಆಗ್ರಹ

October 3, 2026

ಪಜೀರು ಬೈಕ್‌ಗಳ ಅಪಘಾತ ಚಿಕಿತ್ಸೆ ಫಲಕಾರಿಯಾಗದೆ ಚೇಳೂರು ನಿವಾಸಿ ಎಲ್ಲರ ಪ್ರೀತಿಯ ಕುಟ್ಟ ಇನ್ನಿಲ್ಲ

September 22, 2026

ಕಣಚೂರು ಫಿಸಿಯೋಥೆರಪಿ ಕಾಲೇಜ್ ನಲ್ಲಿ ವಿಶ್ವ ಫಿಸಿಯೋಥೆರಪಿ ದಿನಾಚರಣೆ ಕಾರ್ಯಕ್ರಮ

September 8, 2026

Comments are closed.

Advertise
ಸಂಪರ್ಕಿಸಿ

ಹೋಟೆಲ್, ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಇಲಾಖೆ ದಾಳಿ: ಕೊಳೆತ ತರಕಾರಿ, ಕಲಬೆರಕೆ ಟೀ ಪುಡಿ ಪತ್ತೆ

October 28, 2026

ವೆನ್ಲಾಕ್‌ನಲ್ಲಿ ಕೇರಳದ ರೋಗಿಗಳು; ದ.ಕ ಬಡ ರೋಗಿಗಳಗೆ ಐಸಿಯು ಕೊರತೆ

September 29, 2026

ಅಡ್ಯಾರ್‌ನ ದಿ ಕೇಂಬ್ರಿಡ್ಜ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ‘ದಿ ಅಲ್ಫಾಸ್’ ಥ್ರೋಬಾಲ್‌ ಪಂದ್ಯಾಟ

September 26, 2026

ರಾತ್ರಿ ಮಲಗುವಾಗ ಕಾಲುಗಳನ್ನು ಹೊದಿಕೆಯ ಹೊರಗೆ ಇಡುತ್ತೀರಾ?

September 25, 2026
ದೇರಳಕಟ್ಟೆ

ಕಣಚೂರು ಪಬ್ಲಿಕ್ ಸ್ಕೂಲ್‌ನಲ್ಲಿ ‘ಗೋಲ್ ರಶ್–2K26’ ಹ್ಯಾಂಡ್‌ಬಾಲ್ ಪಂದ್ಯಾವಳಿ ಯಶಸ್ವಿ

By UllalaVaniNovember 5, 20260

ದೇರಳಕಟ್ಟೆ, ನ. 5: ಕಣಚೂರು ಪಬ್ಲಿಕ್ ಸ್ಕೂಲ್, ದೇರಳಕಟ್ಟೆ ಇದರ ಆಶ್ರಯದಲ್ಲಿ ಎಐಸಿಎಸ್ ಅಂತರ ಶಾಲಾ ಹ್ಯಾಂಡ್‌ಬಾಲ್ ಪಂದ್ಯಾವಳಿ ‘ಗೋಲ್…

ಗ್ಯಾರಂಟಿ ಯೋಜನೆಗಳು ಸಂಪೂರ್ಣ ವಿಫಲ; ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ಕಾಂಗ್ರೆಸ್ ಸರ್ಕಾರ: ರಾಮದಾಸ್ ಬಂಟ್ವಾಳ

November 5, 2026

ಗ್ಯಾರಂಟಿ ಯೋಜನೆಗಳ ಹೊರೆ; ರಾಜ್ಯದ ಅಭಿವೃದ್ಧಿಗೆ ಅನುದಾನದ ಕೊರತೆ: ಸುಧೀರ್ ಶೆಟ್ಟಿ ಕಣ್ಣೂರು

November 5, 2026

ಶಿಕ್ಷಕರ ಪ್ರತಿಷ್ಠಾನದಿಂದ ವಿದ್ಯಾರ್ಥಿಗಳಿಗೆ 1.10 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

November 5, 2026
1 2 3 … 2,159 Next
Automatic YouTube Gallery

ನ.6-ತೊಕ್ಕೊಟ್ಟು: ಗಟ್ಟಿ ಸಮಾಜ ಭವನದಲ್ಲಿ ಮೂರು ದಿನಗಳ ಮೇಳ

ತೊಕ್ಕೊಟ್ಟಿನಲ್ಲಿ ನ.6ರಿಂದ ಮೂರು ದಿನಗಳ ಕಾಲ ಸಸ್ಯ ಸಂಭ್ರಮ ;ದೀಪಾವಳಿ ಮಾರಾಟ ಸಂತೆ ಹಾಗೂ ಆಹಾರ ಮೇಳ

ಮಕ್ಕಳಿಗಾಗಿ ವಿಶೇಷ ಗೂಡುದೀಪ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ನ.6-ತೊಕ್ಕೊಟ್ಟು: ಗಟ್ಟಿ ಸಮಾಜ ಭವನದಲ್ಲಿ ಮೂರು ದಿನಗಳ ಮೇಳ
Now Playing
ನ.6-ತೊಕ್ಕೊಟ್ಟು: ಗಟ್ಟಿ ಸಮಾಜ ಭವನದಲ್ಲಿ ಮೂರು ದಿನಗಳ ಮೇಳ
ತೊಕ್ಕೊಟ್ಟಿನಲ್ಲಿ ನ.6ರಿಂದ ಮೂರು ದಿನಗಳ ಕಾಲ ಸಸ್ಯ ಸಂಭ್ರಮ ;ದೀಪಾವಳಿ ಮಾರಾಟ ಸಂತೆ ...
ತೊಕ್ಕೊಟ್ಟಿನಲ್ಲಿ ನ.6ರಿಂದ ಮೂರು ದಿನಗಳ ಕಾಲ ಸಸ್ಯ ಸಂಭ್ರಮ ;ದೀಪಾವಳಿ ಮಾರಾಟ ಸಂತೆ ಹಾಗೂ ಆಹಾರ ಮೇಳ

ಮಕ್ಕಳಿಗಾಗಿ ವಿಶೇಷ ಗೂಡುದೀಪ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕುಂಪಲ: ಕೆರೆಗಳ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಿದ ಸಚಿವ ಯು.ಟಿ.ಖಾದರ್
Now Playing
ಕುಂಪಲ: ಕೆರೆಗಳ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಿದ ಸಚಿವ ಯು.ಟಿ.ಖಾದರ್
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ; ಕೆರೆಗಳ ಅಭಿವೃದ್ಧಿಗೆ ಶಿಲಾನ್ಯಾಸ ...
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ; ಕೆರೆಗಳ ಅಭಿವೃದ್ಧಿಗೆ ಶಿಲಾನ್ಯಾಸ ನೆರವೇರಿಸಿದ ಸಚಿವ ಯು.ಟಿ.ಖಾದರ್

ಅನಾರೋಗ್ಯದಿಂದ ಬಳಲುತ್ತಿರುವ 12ಅಶಕ್ತ ಕುಟುಂಬಗಳಿಗೆ ಚೆಕ್ ವಿತರಣೆ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version